ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರ: ರಾಷ್ಟ್ರಪತಿ ಆಳ್ವಿಕೆ ಮುಂದುವರಿಸಲು ಶಾ ನಿರ್ಣಯ

|
Google Oneindia Kannada News

ನವದೆಹಲಿ, ಜೂನ್ 28: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನೂ 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆಯನ್ನು ಮುಂದುವರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಶುಕ್ರವಾರ ಶಾಸನಬದ್ಧ ನಿರ್ಣಯ ತೆಗೆದುಕೊಂಡಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ಮಾತ್ರ ರಾಜ್ಯಪಾಲರ ಆಳ್ವಿಕೆ ಏಕೆ?ಜಮ್ಮು-ಕಾಶ್ಮೀರಕ್ಕೆ ಮಾತ್ರ ರಾಜ್ಯಪಾಲರ ಆಳ್ವಿಕೆ ಏಕೆ?

ಜಮ್ಮು-ಕಾಶ್ಮೀರದಲ್ಲಿ 2019 ರ ಜುಲೈ 3 ರಂದು ರಾಷ್ಟ್ರಪತಿ ಆಳ್ವಿಕೆಯ ಅವಧಿ ಮುಕ್ತಾಯವಾಗಲಿದ್ದು, ಈ ಅವಧಿಯನ್ನು ಇನ್ನೂ ಆರು ತಿಂಗಳು ಮುಂದುವರಿಸಲು ನಿರ್ಧರಿಸಲಾಗಿದೆ. ಈ ವರ್ಷಾಂತ್ಯದಲ್ಲಿ ಕಣಿವೆ ರಾಜ್ಯದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದ್ದು, ಅಲ್ಲಿಯವರೆಗೆ ಇಲ್ಲಿ ರಾಷ್ಟ್ರಪತಿ ಆಳ್ವಿಕೆ ಅನಿವಾರ್ಯ ಎಂದು ಅಮಿತ್ ಶಾ ಹೇಳಿದ್ದಾರೆ.

Amit Shah moves resolution to extend president rule in Jammu and Kashmir

ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯಕ್ಕೆ ವಿಧಾನಸಭೆ ಚುನಾವಣೆ ಇಲ್ಲ!ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯಕ್ಕೆ ವಿಧಾನಸಭೆ ಚುನಾವಣೆ ಇಲ್ಲ!

87 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಪಿಡಿಪಿ 28, ಬಿಜೆಪಿ 25, ಕಾಂಗ್ರೆಸ್ 12, ಎನ್‌ಸಿ 15, ಇತರರು 7 ಸ್ಥಾನಗಳನ್ನು ಪಡೆದಿದ್ದವುರೆ. ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡು ರಚನೆ ಮಾಡಿದ್ದ ಆದರೆ 2018 ರ ಜೂನ್ ನಲ್ಲಿ ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ವಾಪಸ್ ಪಡೆದ ಪರಿಣಾಮ ಸರ್ಕಾರ ಪತನವಾಗಿತ್ತು. ಮೊದಲಿಗೆ ಇಲ್ಲಿ ರಾಜ್ಯಪಾಲರ ಆಳ್ವಿಕೆ ಹೇರಲಾಗಿತ್ತು. ಆ ಅವಧಿ ಮುಕ್ತಾಯವಾದ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಇದು ಜುಲೈ 3 ರಂದು ಮುಕ್ತಾಯವಾಗಬೇಕಿತ್ತು.

English summary
Home minister Amit Shah moved resolution in the Lok Sabha to extend President's rule in Jammu and Kashmir for 6 months
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X