ಜನವರಿಯಲ್ಲಿ ಮತ್ತೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಅಮಿತ್ ಶಾ

ನವದೆಹಲಿ, ಡಿಸೆಂಬರ್ 22: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತಷ್ಟು ಮತದಾರರನ್ನು ಸೆಳೆಯಲು ಗೃಹ ಸಚಿವ ಅಮಿತ್ ಶಾ ಜನವರಿಯಲ್ಲಿ ಮತ್ತೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ.

ಫೆಬ್ರವರಿಯಿಂದ ಪ್ರತಿ ತಿಂಗಳು ಒಂದು ವಾರ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾ ಅವರು ಇತ್ತೀಚಿನ ಬೇಟಿಯಲ್ಲಿ ರಾಜ್ಯದ ಮುಖಂಡರೊಂದಿಗೆ ಆಂತರಿಕ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಸ್ವಾಮಿ ವಿವೇಕಾನಂದ ಅವರ ಜನ್ಮ ದಿನಾಚರಣೆಯಾದ ಜನವರಿ 12 ರಂದು ಅವರು ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಜನವರಿ 23ರಂದು ಸುಭಾಷ್ ಚಂದ್ರ ಭೋಸ್ ಅವರ ಜನ್ಮದಿನವಾಗಿದ್ದರೂ ಅಂದೇ ಭೇಟಿ ನೀಡಬಹುದು ಎಂದು ಹೇಳಲಾಗುತ್ತಿದೆ.

Amit Shahs Next West Bengal Visit In Jan

294 ಸದಸ್ಯರಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಶಾ 200 ಸ್ಥಾನಗಳನ್ನು ಗಳಿಸುವ ಗುರಿ ಹೊಂದಿದ್ದಾರೆ. ಅವರು ಇತ್ತೀಚೆಗೆ ಎರಡು ದಿನಗಳ ಪ್ರಶ್ಚಿಮ ಬಂಗಾಳ ಪ್ರವಾಸ ನಡೆಸಿ ವಾಪಸಾಗಿದ್ದಾರೆ. 2021ರ ಮಧ್ಯದಲ್ಲಿ ಚುನಾವಣೆ ನಡೆಯಲಿದ್ದು, ಇದುವರೆಗೂ ದಿನಾಂಕ ನಿಗದಿಯಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+