• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯಸಭಾ ಸದಸ್ಯತ್ವಕ್ಕೆ ಅಮಿತ್ ಶಾ, ಸ್ಮೃತಿ ಇರಾನಿ ರಾಜೀನಾಮೆ

|

ನವದೆಹಲಿ, ಮೇ 29: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ ಹಾಗೂ ಡಿಎಂಕೆ ನಾಯಕಿ ಕನಿಮೊಳಿ ಅವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಈ ನಾಲ್ವರೂ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ರಾಜ್ಯಸಭೆಯ ಸದಸ್ಯತ್ವ ತೊರೆದಿದ್ದಾರೆ.

ಮೋದಿ ಸಂಪುಟಕ್ಕೆ ಅಮಿತ್, ಅಧ್ಯಕ್ಷ ಸ್ಥಾನಕ್ಕೆ ಯಾರು ಸೂಕ್ತ?

ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರ, ರವಿಶಂಕರ್ ಪ್ರಸಾದ್ ಅವರು ಬಿಹಾರದ ಪಟ್ನಾ ಸಾಹಿಬ್ ಕ್ಷೇತ್ರದಿಂದ, ಸ್ಮೃತಿ ಇರಾನಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಮತ್ತು ಕನಿಮೊಳಿ ಅವರು ತಮಿಳುನಾಡಿನ ತೂತುಕುಡಿಯಿಂದ ಲೋಕಸಭೆಗೆ ಚುನಾಯಿತರಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಅಮಿತ್ ಶಾ 2017ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಸ್ಮೃತಿ ಇರಾನಿ ಅವರು 2011ರಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ರವಿಶಂಕರ್ ಪ್ರಸಾದ್ ಅವರು 2012ರಿಂದ ಬಿಹಾರದ ರಾಜ್ಯಸಭೆ ಸದಸ್ಯರಾಗಿದ್ದರು. ಡಿಎಂಕೆ ನಾಯಕಿ ಕನಿಮೊಳಿ ಅವರು 2013ರಿಂದ ರಾಜ್ಯಸಭೆಯ ಸದಸ್ಯರಾಗಿದ್ದರು.

ಮೂಲಗಳ ಪ್ರಕಾರ ರವಿಶಂಕರ್ ಪ್ರಸಾದ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಹಿಂದೆ ಎನ್‌ಡಿಎ ಸರ್ಕಾರದಲ್ಲಿ ಸಚಿವರಾಗಿದ್ದ ಎಲ್‌ಜೆಪಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಬಿಜೆಪಿ ಉದ್ದೇಶಿಸಿದೆ. ರಾಮ್ ವಿಲಾಸ್ ಪಾಸ್ವಾನ್ ಅವರು ತಮ್ಮ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ಚುನಾವಣೆಯಿಂದ ಹಿಂದೆ ಸರಿದಿದ್ದರು.

ಅಮೇಥಿ ಲೋಕಸಭಾ ಫಲಿತಾಂಶ : ಸ್ಮೃತಿ ವಿರುದ್ಧ ರಾಹುಲ್ ಹೀನಾಯ ಸೋಲು

ಗುಜರಾತ್‌ನಲ್ಲಿ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ಅವರ ರಾಜೀನಾಮೆಯಿಂದ ಎರಡು ಸ್ಥಾನಗಳು ತೆರವಾಗಲಿದ್ದು, ಚುನಾವಣೆಯಲ್ಲಿ ಸೋಲು ಅನುಭವಿಸಿದ ಪಕ್ಷದ ಪ್ರಮುಖ ನಾಯಕರನ್ನು ಅಲ್ಲಿಂದ ಆಯ್ಕೆ ಮಾಡಲು ಮುಂದಾಗುವ ಸಾಧ್ಯತೆ ಇದೆ.

English summary
BJP President Amit Shah, Union ministers Smriti Irani and Ravi Shankar Prasad and DMK leader Kanimozhi resign as Rajya Sabha members after elected to Lok Sabha in elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X