ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಭದ್ರತೆಯ ಭರವಸೆ ನೀಡಿದ ಅಮಿತ್ ಶಾ

|
Google Oneindia Kannada News

ನವದೆಹಲಿ, ಏಪ್ರಿಲ್ 22: ತಮ್ಮ ಪ್ರಾಣದ ಹಂಗನ್ನೇ ತೊರೆದು ಬೇರೆಯವರಿಗೋಸ್ಕರ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

Recommended Video

ಮನೆಯಿಂದ ಹೊರಗೆ ಬಂದವರಿಗೆ ನಡು ರಸ್ತೆಯಲ್ಲಿ ಡಾನ್ಸ್ ಮಾಡಿಸಿ ಬಸ್ಕಿ ಹೊಡೆಸಿದ ಪೊಲೀಸ್ | Cops | Oneindia Kannada

ಭಾರತೀಯ ವೈದ್ಯಕೀಯ ಸಂಘದ ಹಲವು ವೈದ್ಯಕೀಯ ವಕ್ತಾರರೊಂದಿಗೆ ಮಾತಕತೆ ನಡೆಸಿದ ಅವರು, ವೈದ್ಯರ ಉತ್ತಮ ಕಾರ್ಯವನ್ನು ಶ್ಲಾಘಿಸಿದ್ದಾರೆ. ಐಎಂಎ ವೈದ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿರುವ ಅಮಿತ್ ಶಾ ಅವರು ಸಂಪೂರ್ಣ ಭದ್ರತೆ ನೀಡುವ ಭರವಸೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ.

ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ದಾಳಿ ಹಾಗೂ ಹಲ್ಲೆ ಖಂಡಿಸಿ ಐಎಂಎ ಪ್ರತಿಭಟನೆ ನಡೆಸಲು ಮುಂದಾಗಿತ್ತು.

Amit Shah Speaks To Doctors Appreciates Their Work Assures Security

ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಮಹಾಮಾರಿ ವಿರುದ್ಧ ಹೋರಾಟ ಮಾಡುತ್ತಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಮೇಲೆ ದೇಶದ ವಿವಿಧ ಭಾಗಗಳಲ್ಲಿ ಹಲ್ಲೆ ಹಾಗೂ ದಾಳಿ ಪ್ರಕರಣಗಳು ನಡೆಯುತ್ತಿವೆ.

ತಮಿಳುನಾಡಿನ ಶಿಲ್ಲೊಂಗ್ ನಲ್ಲಿ ಕೊರೊನಾ ವೈರಸ್ ನಿಂದ ಮೃತಪಟ್ಟ ಇಬ್ಬರು ವೈದ್ಯರ ಅಂತ್ಯ ಸಂಸ್ಕಾರದ ವೇಳೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು.

ತಮ್ಮ ಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದರಿಂದ ವೈರಸ್ ಹರಡುತ್ತದೆ ಎಂದು ಸ್ಥಳೀಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಕೆಲ ವೈದ್ಯರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದ ಘಟನೆಗಳೂ ಕೂಡ ವರದಿಯಾಗಿದ್ದವು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಅಮಿತ್ ಶಾ ವೈದ್ಯರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದ್ದಾರೆ. ಸೂಕ್ತ ಭದ್ರತೆ ಕಲ್ಪಿಸಿಕೊಡುವುದಾಗಿ ತಿಳಿಸಿದ್ದಾರೆ.

English summary
Union Home Minister Amit Shah on Wednesday interacted with a group of doctors and representatives of the Indian Medical Association (IMA) and appreciated their good work besides assuring them security, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X