ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮಹಾ'ದಲ್ಲಿ ರಾಷ್ಟ್ರಪತಿ ಆಡಳಿತ: ಅಮಿತ್ ಶಾ ವರದಿ ಸಲ್ಲಿಕೆ

|
Google Oneindia Kannada News

ನವದೆಹಲಿ, ನವೆಂಬರ್ 20: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಸಭೆಯಲ್ಲಿ ವರದಿ ಸಲ್ಲಿಸಲಿದ್ದಾರೆ.

ಸದ್ಯ ಅಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ರಾಜಕೀಯ ಪಕ್ಷಗಳ ನಡುವಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಸ್ಥಿರವಾದ ಸರ್ಕಾರ ಸಾಧ್ಯತೆ ಇಲ್ಲ ಎಂದು ಗೃಹ ಸಚಿವಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದರು.

ನವೆಂಬರ್.20ರಂದೇ ಬಗೆಹರಿಯುತ್ತಾ ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು?ನವೆಂಬರ್.20ರಂದೇ ಬಗೆಹರಿಯುತ್ತಾ ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು?

ನವೆಂಬರ್ 12 ರಿಂದ ಮಹಾರಾಷ್ಟ್ರವನ್ನು ರಾಷ್ಟ್ರಪತಿ ಆಡಳಿತದಲ್ಲಿರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೆಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಸಂವಿಧಾನದ 356(1) ನೇ ವಿಧಿಯನ್ನು ಜಾರಿಗೊಳಿಸಿ ಮತ್ತು ವಿಧಾನಸಭೆಯನ್ನು ಅಮಾನತಿನಲ್ಲಿಡಬೇಕೆಂದು ರಾಜ್ಯಪಾಲರ ವರದಿಯನ್ನು ಪರಿಗಣಿಸಿ ರಾಷ್ಟ್ರಪತಿ ಅಂಕಿತಕ್ಕೆ ಶಿಫಾರಸು ಮಾಡಿತ್ತು.

Amit Shah To Table Report On Presidents Rule In Maharashtra In Parliment Today

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತದ ಕುರಿತು ಕೇಂದ್ರ ಸರ್ಕಾರ ಬುಧವಾರ ವರದಿ ಮಂಡಿಸಲಿದೆ. ಇದರ ಬೆನ್ನ್ಲಲ್ಲೇ ತನ್ನ ಸೈದ್ದಾಂತಿಕ ಎದುರಾಳಿ ಶಿವಸೇನೆಯ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚಿಸಲು ಎನ್ ಸಿಪಿ ಹಾಗೂ ಕಾಂಗ್ರೆಸ್ ನಾಯಕರು ಇಂದು ಮತ್ತೊಂದು ಸುತ್ತಿನ ಸಭೆ ನಡೆಸುವ ನಿರೀಕ್ಷೆ ಇದೆ.

ಸೇನಾಕ್ಕೆ ಸಿಎಂ ಸ್ಥಾನ, ಎನ್ಸಿಪಿ-ಕಾಂಗ್ರೆಸ್ಸಿಗೆ 2 ಡಿಸಿಎಂ ಹೊಸ ಡೀಲ್?ಸೇನಾಕ್ಕೆ ಸಿಎಂ ಸ್ಥಾನ, ಎನ್ಸಿಪಿ-ಕಾಂಗ್ರೆಸ್ಸಿಗೆ 2 ಡಿಸಿಎಂ ಹೊಸ ಡೀಲ್?

ಸೋಮವಾರ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಮಹಾರಾಷ್ಟ್ರದ ರಾಜಕೀಯ ಸ್ಥಗಿತ ಮತ್ತು ಶಿವಸೇನೆಗೆ ಬೆಂಬಲ ನೀಡುವ ಕುರಿತು ಚರ್ಚಿಸಿದ್ದರು. ಆದರೆ ಇನ್ನೂ ಅಂತಿಮ ತೀರ್ಮಾನಕ್ಕೆ ಬಂದಿದ್ದಿಲ್ಲ. ಇಂದಿನ ಸಭೆಯಲ್ಲಿ ಸರ್ಕಾರ ರಚಿಸುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

English summary
Union Home Minister Amit Shah is Expected to Table a Report in Rajya Sabha on Wednesday Regarding the President's Rule in Maharashtra. the ongoing political impasse, Maharashtra Was Placed Under the Presidents Rule on November 12 after Governor Bhagat Singh Koshyari recommended the Same in Report Submitted with the Home Ministry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X