ಬಿಜೆಪಿ ಅಧ್ಯಕ್ಷ ಸ್ಥಾನ ಬದಲಾವಣೆ ಸದ್ಯಕ್ಕಿಲ್ಲ, ಡಿಸೆಂಬರ್ ವರೆಗೂ ಶಾ ರಾಜ್ಯಭಾರ

Recommended Video

      ಬಿಜೆಪಿ ಅಧ್ಯಕ್ಷ ಸ್ಥಾನದ ಬಗೆಗಿನ ಗೊಂದಲಕ್ಕೆ ತೆರೆ | Oneindia Kannada

      ನವದೆಹಲಿ, ಜೂನ್ 13: ಗೃಹಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅಮಿತ್ ಶಾ ಅವರು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬ ಊಹಾಪೋಹಗಳಿಗೆ ಬಿಜೆಪಿ ತೆರೆ ಎಳೆದಿದೆ.

      Amit Shah will remain as president of BJP till december: Sources

      ಸದ್ಯಕ್ಕೆ ಅಮಿತ್ ಶಾ ಅವರನ್ನು ಅಧ್ಯಕ್ಷ ಸ್ಥಾನದಿಂದ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಅದು ಹೇಳಿದೆ.ಜೂನ್ 13 ರಂದು ಬಿಜೆಪಿ ಉನ್ನತ ಸಮಿತಿ ಸಭೆ ನಡೆಯಲಿದ್ದು, ಅಂದು ಬಿಜೆಪಿಯ ನೂತನ ರಾಷ್ಟ್ರಾಧ್ಯಕ್ಷರನ್ನೂ ಆರಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಉನ್ನತ ಮೂಲಗಳ ಮಾಹಿತಿ ಪ್ರಕಾರ ಅಮಿತ್ ಶಾ ಅವರನ್ನು ಸದ್ಯಕ್ಕೆ ಬದಲಿಸುವುದಿಲ್ಲ. '

      ಇದೇ ವರ್ಷ ನಡೆಯಲಿರುವ ಮಹಾರಾಷ್ಟ್ರ. ಹರ್ಯಾಣ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಅಧ್ಯಕ್ಷ ಸ್ಥಾನದ ಬದಲಾವಣೆಯ ಬಗ್ಗೆ ಯೋಚಿಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

      ಗೃಹಸಚಿವರೂ ಆಗಿರುವ ಅಮಿತ್ ಶಾ ಅವರಿಗೆ ಒತ್ತಡವಾಗಬಾರದೆಂಬ ಕಾರಣಕ್ಕೆ ಕಾರ್ಯಾಧ್ಯಕ್ಷ ಹುದ್ದೆಯನ್ನು ಸೃಷ್ಟಿಸಲಾಗುತ್ತಿದ್ದು, ಅಧ್ಯಕ್ಷರ ಜವಾಬ್ದಾರಿಗಳನ್ನು ಕಾರ್ಯಾಧ್ಯಕ್ಷರು ವಹಿಸಲಿದ್ದಾರೆ.

      2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ ಅವರ ಕಾರ್ಯತಂತ್ರವೇ ಕಾರಣವಾಗಿದ್ದು, ಇದೀಗ ಅವರನ್ನು ಅಧ್ಯಕ್ಷ ಸ್ಥಾನದಿಂದ ಬದಲಾಯಿಸುವುದರಿಂದ ಮುಂಬರುವ ವಿಧಾನಸಭೆ ಚುನಾವಣೆಗಳಲ್ಲಿ ಅದು ಪಕ್ಷಕ್ಕೇ ಹಿನ್ನಡೆಯನ್ನುಂಟು ಮಾಡಬಹುದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+