ಅಮಿತಾಭ್‌ ಬಚ್ಚನ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ನವದೆಹಲಿ, ಅಕ್ಟೋಬರ್ 18: ಬಾಲಿವುಡ್ ಬಿಗ್​ಬಿ ಅಮಿತಾಭ್​ ಬಚ್ಚನ್ ಅವರ ಆರೋಗ್ಯದಲ್ಲಿ ಏರು ಪೇರು ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅವರಿಗೆ ಲಿವರ್ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಅಮಿತಾಭ್ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಇನ್ನು ಕೆಲವು ಮಾಧ್ಯಮಗಳು ಇದೊಂದು ಸುಳ್ಳು ಸುದ್ದಿ ಎಂದು ವರದಿ ಮಾಡಿವೆ.

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅಮಿತಾಭ್ ಬಚ್ಚನ್ ಅವರಿಗೆ ವಿಶೇಷ ಕ್ಯಾಬಿನ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ನೋಡಲು ಆಪ್ತ ಸಂಬಂಧಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಮಾಧ್ಯಮದವರಿಗೆ ಹೆಚ್ಚಿನ ಮಾಹಿತಿ ನೀಡಲು ಕುಟುಂಬಸ್ಥರು ನಿರಾಕರಿಸಿದ್ದಾರೆ ಎಂದು ವರದಿ ಮಾಡಿದೆ.

Amitabh Bachchans Health Fluctuates

ಈ ಬಗ್ಗೆ ವರದಿ ಮಾಡಿದ್ದ ಟೈಮ್ಸ್​ ಆಫ್​ ಇಂಡಿಯಾ ಪತ್ರಿಕೆ, 77 ವರ್ಷದ ಅಮಿತಾಭ್ ಬಚ್ಚನ್ ಅ. 15ರಿಂದ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅ. 15ರಂದು ಮಧ್ಯರಾತ್ರಿ 2 ಗಂಟೆಗೆ ಅವರನ್ನು ನಾನಾವತಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿ ಮಾಡಿದೆ.

ಆದರೆ, ಈ ಸುದ್ದಿಯನ್ನು ಅಲ್ಲಗಳೆದಿರುವ ಅಮರ್ ಉಜಾಲ ಎಂಬ ಪತ್ರಿಕೆ, ಇದೊಂದು ಕಾಲ್ಪನಿಕ ಸುದ್ದಿ. ಅಭಿಮಾನಿಗಳು ಗಾಬರಿಯಾಗುವ ಅಗತ್ಯವಿಲ್ಲ. ಅಮಿತಾಭ್ ಬಚ್ಚನ್ ಆರೋಗ್ಯವಾಗಿದ್ದಾರೆ.

ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂಬ ಸುದ್ದಿ ಸುಳ್ಳು. ನಾನಾವತಿ ಆಸ್ಪತ್ರೆಗೆ ರೊಟೀನ್​ ಚೆಕಪ್​ಗೆಂದು ಹೋಗಿದ್ದ ಅಮಿತಾಭ್ ಬಚ್ಚನ್ ನಂತರ ಮನೆಗೆ ಮರಳಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವುದು ಇದಕ್ಕೆ ಸಾಕ್ಷಿ ಎಂದು ಹಿಂದಿ ಪತ್ರಿಕೆ ವರದಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+