ಜನಲೋಕ್ ಪಾಲ್ ಗಾಗಿ ಮಾ. 23ರಿಂದ ಅಣ್ಣಾ ಹಜಾರೆ ಹೋರಾಟ ಶುರು

Posted By:
Subscribe to Oneindia Kannada

ನವದೆಹಲಿ, ಡಿಸೆಂಬರ್ 5 : ಭ್ರಷ್ಟಾಚಾರ ವಿರೋಧಿ ಜನಲೋಕ್ ಪಾಲ್ ಮಸೂದೆಯನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮತ್ತೆ ಹೋರಾಟದ ಹಾದಿ ತುಳಿಯಲು ಮುಂದಾಗಿದ್ದಾರೆ.

ಲೋಕ್ ಪಾಲ್ ವಿಳಂಬ, ಹೋರಾಟದ ಎಚ್ಚರಿಕೆ ನೀಡಿದ ಅಣ್ಣ ಹಜಾರೆ

ಈ ಬಗ್ಗೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ವಿರೋಧಿ ಲೋಕ್ ಪಾಲ್ ಮಸೂದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ 2018 ಮಾರ್ಚ್ 23 ರಿಂದ ಪ್ರತಿಭಟನೆ ನಡೆಸುವುದಾಗಿ ಅಣ್ಣಾ ಹಜಾರೆ ಹೇಳಿದರು.

Anna Hazare announces protest against Centre on March 23

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ ವಿರೋಧಿ ಜನಲೋಕಪಾಲ್ ಮಸೂದೆಯನ್ನು ದುರ್ಬಲಗೊಳಿಸಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕೈಗಾರಿಕೋದ್ಯಮಿಗಳ ಪರವಾಗಿರುವ ಪಕ್ಷಗಳಾಗಿವೆ, ಎಂದಿಗೂ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕ್ ಪಾಲ್ ರೂಪಿಸಿದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸರ್ಕಾರ ಮಸೂದೆಯನ್ನು ದುರ್ಬಲಗೊಳಿಸಿತ್ತು. ಇದೀಗ ನರೇಂದ್ರ ಮೋದಿ ನೇತೃತ್ವದ ಸರ್ಕಾರವೂ ಸಹ ಲೋಕ್ ಪಾಲ್ ಮಸೂದೆಯನ್ನು ದುರ್ಬಲಗೊಳಿಸಿದೆ ಎಂದು ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Upset over the non-appointment of Lokpal for the last four years, anti-graft activist Anna Hazare today announced a protest against the government on March 23, observed as the Martyrs' Day, next year.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ