ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದಿನಿಂದ ಮತ್ತೆ ಶುರು ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

|
Google Oneindia Kannada News

ನವದೆಹಲಿ, ಜನವರಿ 30: ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಲೋಕಪಾಲ ಮತ್ತು ಲೋಕಾಯುಕ್ತರನ್ನು ನೇಮಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ, ಗಾಂಧಿ ವಾದಿ ಅಣ್ಣಾ ಹಜಾರೆ ಅವರು ಇಂದಿನಿಂದ ಮತ್ತೆ ಉಪವಾಸ ಸತ್ಯಾಗ್ರಾಹ ಆರಂಭಿಸಲಿದ್ದಾರೆ.

ಮಹಾತ್ಮಾ ಗಾಂಧೀಜಿ ಅವರ ಪುಣ್ಯ ತಿಥಿಯಾದ ಜ.30 ರಿಂದ ಅಣ್ಣಾ ಹಜಾರೆ ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಸರ್ಕಾರದ ನಿದ್ದೆ ಕೆಡಿಸಲು ಸಜ್ಜಾದ ಅಣ್ಣಾ, ಮತ್ತೆ ಉಪವಾಸ ಸತ್ಯಾಗ್ರಹಸರ್ಕಾರದ ನಿದ್ದೆ ಕೆಡಿಸಲು ಸಜ್ಜಾದ ಅಣ್ಣಾ, ಮತ್ತೆ ಉಪವಾಸ ಸತ್ಯಾಗ್ರಹ

2014 ಜನವರಿಯಲ್ಲಿ ಸಂಸತ್‌ನಿಂದ ಅನುಮೋದನೆ ಪಡೆದು ರಾಷ್ಟ್ರಪತಿಯವರಿಂದ ಸಹಿ ಪಡೆದಿದ್ದರೂ ಲೋಕಪಾಲ ಮಸೂದೆಯನ್ನು ಜಾರಿಗೆ ತರುವಲ್ಲಿ ಎನ್ ಡಿಎ ಸರ್ಕಾರ ವಿಫಲವಾಗಿದೆ ಎಂದು ಖಂಡಿಸಿರುವ 81 ವರ್ಷ ವಯಸ್ಸಿನ ಅಣ್ಣಾ, ಅಕ್ಟೋಬರ್ 2 ರಂದೇ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಹೇಳಿದ್ದರು.

Anna Hazare launches fast to demand Lokpal

ಆದರೆ ಗಾಂಧೀಜಿಯವರ ಹುಟ್ಟಿದ ದಿನ(ಅ.02)ದಂದು ಉಪವಾಸ ಸತ್ಯಾಗ್ರಹ ನಡೆಸಲು ಹೊರಟಿದ್ದ ಅಣ್ಣಾ ಅವರ ಮನವೊಲಿಸಿ, ಉಪವಾಸ ಹಿಂಪಡೆಯುವಲ್ಲಿ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಯಶಸ್ವಿಯಾಗಿದ್ದರು. ಆದರೆ ಪಟ್ಟು ಬಿಡದ ಅಣ್ಣಾ ಈಗ ಮತ್ತೊಮ್ಮೆ ಉಪವಾಸಕ್ಕೆ ಹೊರಟಿದ್ದಾರೆ.

ಕೇಂದ್ರ ಸರ್ಕಾರದ್ದು 'ಕಪಟಬುದ್ಧಿ': ಅಣ್ಣಾ ಹಜಾರೆ ಆಕ್ರೋಶಕೇಂದ್ರ ಸರ್ಕಾರದ್ದು 'ಕಪಟಬುದ್ಧಿ': ಅಣ್ಣಾ ಹಜಾರೆ ಆಕ್ರೋಶ

2011 ರಲ್ಲಿ ಲೋಕಪಾಲ ಮಸೂದೆಗೆ ಒಪ್ಪಿಗೆ ನೀಡುವಂತೆ ಅಣ್ಣಾ ಹಜಾರೆ ಆರಂಭಿಸಿದ್ದ ಉಪವಾಸ ಸತ್ಯಾಗ್ರಹ ಅಂದಿನ ಯುಪಿಎ ಸರ್ಕಾರದ ಮೇಲೆ ಸಾಕಷ್ಟು ಪ್ರಭಾವ ಬೀರಿತ್ತು. ಇಂದಿನಿಂದ ಅಣ್ಣಾ ಆರಂಭಿಸಿರುವ ಉಪವಾಸ ಸತ್ಯಾಗ್ರಹವೂ ಮುಂಬರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ಈಗಿನ ಎನ್ ಡಿಎ ಸರ್ಕಾರದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದರೆ ಅಚ್ಚರಿಯಿಲ್ಲ.

English summary
Social activist Anna Hazare on Wednesday announced the beginning of his fast to demand the setting up of a Lokpal at the Centre and Lokayuktas in states as the Narendra Modi government "had failed" to set up the anti-corruption bodies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X