ಪದ್ಮಭೂಷಣ ವಾಪಸಾತಿಗೆ ಮುಂದಾದ ಗಾಂಧಿವಾದಿ ಅಣ್ಣಾ ಹಜಾರೆ

ನವದೆಹಲಿ, ಫೆಬ್ರವರಿ 04: ಲೋಕಪಾಲ ಮತ್ತು ಲೋಕಾಯುಕ್ತ ನೇಮಕಕ್ಕೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿರುವ ಸಾಮಾಜಿಕ ಕಾರ್ಯಕರ್ತ, ಗಾಂಧಿವಾದಿ ಅಣ್ಣಾ ಹಜಾರೆ, ತಮ್ಮ ಪದ್ಮಭೂಷಣ ಪ್ರಶಸ್ತಿಯನ್ನು ವಾಪಸ್ ಮಾಡಲು ಮುಂದಾಗಿದ್ದಾರೆ.

"ನಾನು ರಾಷ್ಟ್ರಪತಿಗಳಿಗೆ ನನ್ನ ಪ್ರಶಸ್ತಿಯನ್ನು ವಾಪಸ್ ಮಾಡುತ್ತೇನೆ. ನಾನು ಆ ಪ್ರಶಸ್ತಿಗಾಗಿ ಕೆಲಸ ಮಾಡಿಲ್ಲ. ನಾನು ದೇಶ ಮತ್ತು ಸಮಾಜಕ್ಕಾಗಿ ಕೆಲಸ ಮಾಡುತ್ತಿದ್ದರೆ, ನೀವು ನನಗೆ ಪದ್ಮಭೂಷಣ ಕೊಟ್ಟಿದ್ದೀರಿ. ನನಗೆ ಅದರ ಅಗತ್ಯವಿಲ್ಲ. ನನ್ನ ಬೇಡಿಕೆಗಳನ್ನು ಈಡೇರಿಸದ ಮೇಲೆ ಆ ಪ್ರಶಸ್ತಿಯನ್ನು ಇಟ್ಟುಕೊಂಡು ಏನು ಮಾಡಲಿ? ದೇಶ ಮತ್ತು ಸಮಾಜ ಇಂಥ ಸ್ಥಿತಿಯಲ್ಲಿರುವಾಗ ಈ ಪ್ರಶಸ್ತಿಯನ್ನು ಇಟ್ಟುಕೊಳ್ಳಲು ನನಗೆ ಮನಸ್ಸಿಲ್ಲ" ಎಂದು ಹಜಾರೆ ಹೇಳಿದ್ದಾರೆ.

Anna Hazare to return his Padma Bhushan Award to President

2014 ಜನವರಿಯಲ್ಲಿ ಸಂಸತ್‌ನಿಂದ ಅನುಮೋದನೆ ಪಡೆದು ರಾಷ್ಟ್ರಪತಿಯವರಿಂದ ಸಹಿ ಪಡೆದಿದ್ದರೂ ಲೋಕಪಾಲ ಮಸೂದೆಯನ್ನು ಜಾರಿಗೆ ತರುವಲ್ಲಿ ಎನ್ ಡಿಎ ಸರ್ಕಾರ ವಿಫಲವಾಗಿದೆ ಎಂದು ಖಂಡಿಸಿರುವ 81 ವರ್ಷ ವಯಸ್ಸಿನ ಅಣ್ಣಾ, ಅಕ್ಟೋಬರ್ 2 ರಂದೇ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಹೇಳಿದ್ದರು.

ಆದರೆ ಗಾಂಧೀಜಿಯವರ ಹುಟ್ಟಿದ ದಿನ(ಅ.02)ದಂದು ಉಪವಾಸ ಸತ್ಯಾಗ್ರಹ ನಡೆಸಲು ಹೊರಟಿದ್ದ ಅಣ್ಣಾ ಅವರ ಮನವೊಲಿಸಿ, ಉಪವಾಸ ಹಿಂಪಡೆಯುವಲ್ಲಿ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಯಶಸ್ವಿಯಾಗಿದ್ದರು. ಆದರೆ ಪಟ್ಟು ಬಿಡದ ಅಣ್ಣಾ ಈಗ ಮತ್ತೊಮ್ಮೆ ಉಪವಾಸ ಆರಂಭಿಸಿದ್ದು, ಜ.30, ಗಾಂಧೀಜಿ ಪುಣ್ಯತಿಥಿಯಂದು, ಅಂದರೆ ಹುತಾತ್ಮ ದಿನದಂದು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

81 ವರ್ಷ ವಯಸ್ಸಿನ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದರಿಂದ ಕೊಂಚ ಅಸ್ವಸ್ಥರಾಗಿದ್ದು, ಅವರ ರಕ್ತದೊತ್ತಡ ಮತ್ತು ದೇಹದಲ್ಲಿನ ಸಕ್ಕರೆ ಪ್ರಮಾಣಲ್ಲಿ ಇಳಿಕೆಯಾಗಿದೆ ಎಂದು ವೈದ್ಯರು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+