ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ: ಇಂದಿನಿಂದ ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

|
Google Oneindia Kannada News

ನವದೆಹಲಿ, ಮಾರ್ಚ್ 23: ಸಮರ್ಥ ಲೋಕಪಾಲ ನೇಮಕ ಮತ್ತು ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ನಡೆಸಲು ಉದ್ದೇಶಿಸಿರುವ ಉಪವಾಸ ಸತ್ಯಾಗ್ರಹ ಇಂದಿನಿಂದ(ಮಾ.23) ಆರಂಭವಾಗಲಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಸ್ವಾಮಿನಾಥನ್ ವರದಿ ಅನುಷ್ಠಾನದ ಬೇಡಿಕೆಯೂ ಈ ಹೋರಾಟದ ಹಿಂದಿದೆ. ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.

ನನ್ನ ಚಳವಳಿಯಿಂದ ಮತ್ತೊಬ್ಬ ಕೇಜ್ರಿವಾಲ್ ಹುಟ್ಟುವುದಿಲ್ಲ: ಅಣ್ಣಾ ಹಜಾರೆ ನನ್ನ ಚಳವಳಿಯಿಂದ ಮತ್ತೊಬ್ಬ ಕೇಜ್ರಿವಾಲ್ ಹುಟ್ಟುವುದಿಲ್ಲ: ಅಣ್ಣಾ ಹಜಾರೆ

2011 ರಲ್ಲಿ ಲೋಕಪಾಲ ಮಸೂದೆಗೆ ಒಪ್ಪಿಗೆ ನೀಡುವಂತೆ ಅಣ್ಣಾ ಹಜಾರೆ ಆರಂಬಿಸಿದ್ದ ಆಂದೋಲನ ದೇಶದಾದ್ಯಂತ ಭ್ರಷ್ಟಾಚಾರ ವಿರೋಧಿ ಅಲೆ ಎಬ್ಬಿಸಿತ್ತು. ಈ ಆಂದೋಲನದಿಂದ ಅರವಿಂದ್ ಕೇಜ್ರಿವಾಲ್, ಕಿರಣ್ ಬೇಡಿಯಂಥ ನಾಯಕರು ರಾಜಕೀಯ ಪ್ರವೇಶಮಾಡುವಂತಾಗಿತ್ತು. ಆದರೆ ತನ್ನ ಹೋರಾಟವನ್ನು ಯಾರೂ ರಾಜಕೀಯಕ್ಕಾಗಿ ಬಳಸಿಕೊಳ್ಳಬಾರದು ಎಂಬ ಕಾರಣಕ್ಕೆ ಈ ಬಾರಿ ಅಣ್ಣಾ ಹಜಾರೆ ಬೇರೆಯದೇ ಕ್ರಮ ಕೈಗೊಂಡಿದ್ದಾರೆ.

Anna Hazare to start indefinite hunger strike today

ತಮ್ಮ ಜೊತೆ ಪ್ರತಿಭಟನೆಯಲ್ಲಿ ಕೈಜೋಡಿಸುವವರು ನಂತರ ಯಾವುದೇ ಕಾರಣಕ್ಕೂ ರಾಜಕೀಯ ಸೇರುವಂತಿಲ್ಲ ಎಂದು ಮೊದಲೇ100 ರೂ. ಅಫಿಡವಿಟ್ ಗೆ ಸಹಿ ಮಾಡಬೇಕಾಗಿ ಹೇಳಿದ್ದಾರೆ.

English summary
Anti-corruption crusader Anna Hazare will here on Friday begin his indefinite fast to bring about a competent Lokpal and ensure better production cost for farm produce.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X