ಉಪವಾಸ ಸತ್ಯಾಗ್ರಹ ಆರಂಭಿಸಿರುವ ಅಣ್ಣಾ ಹಜಾರೆ ಅಸ್ವಸ್ಥ
ನವದೆಹಲಿ, ಫೆಬ್ರವರಿ 02: ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಲೋಕಪಾಲ ಮತ್ತು ಲೋಕಾಯುಕ್ತರನ್ನು ನೇಮಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ, ಗಾಂಧಿ ವಾದಿ ಅಣ್ಣಾ ಹಜಾರೆ ಅವರು ಜ.30 ರಂದು ಆರಂಭಿಸಿರುವ ಉಪವಾ ಸತ್ಯಾಗ್ರಹ ಮೂರನೇ ದಿನ ತಲುಪಿದೆ.
ಅಣ್ಣಾ ಅವರು ಅಸ್ವಸ್ಥರಾಗಿದ್ದು, ಅವರ ರಕ್ತದೊತ್ತಡ ಮತ್ತು ದೇಹದಲ್ಲಿನ ಸಕ್ಕರೆ ಪ್ರಮಾಣ ಗಮನೀಯ ಇಳಿಕೆ ಕಂಡಿದೆ ಎಂದು ವೈದ್ಯರು ಹೇಳಿದ್ದಾರೆ.
ಮಹಾತ್ಮಾ ಗಾಂಧೀಜಿ ಅವರ ಪುಣ್ಯ ತಿಥಿಯಾದ ಜ.30 ರಿಂದ ಅಣ್ಣಾ ಹಜಾರೆ ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

2014 ಜನವರಿಯಲ್ಲಿ ಸಂಸತ್‌ನಿಂದ ಅನುಮೋದನೆ ಪಡೆದು ರಾಷ್ಟ್ರಪತಿಯವರಿಂದ ಸಹಿ ಪಡೆದಿದ್ದರೂ ಲೋಕಪಾಲ ಮಸೂದೆಯನ್ನು ಜಾರಿಗೆ ತರುವಲ್ಲಿ ಎನ್ ಡಿಎ ಸರ್ಕಾರ ವಿಫಲವಾಗಿದೆ ಎಂದು ಖಂಡಿಸಿರುವ 81 ವರ್ಷ ವಯಸ್ಸಿನ ಅಣ್ಣಾ, ಅಕ್ಟೋಬರ್ 2 ರಂದೇ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಹೇಳಿದ್ದರು.
ಆದರೆ ಗಾಂಧೀಜಿಯವರ ಹುಟ್ಟಿದ ದಿನ(ಅ.02)ದಂದು ಉಪವಾಸ ಸತ್ಯಾಗ್ರಹ ನಡೆಸಲು ಹೊರಟಿದ್ದ ಅಣ್ಣಾ ಅವರ ಮನವೊಲಿಸಿ, ಉಪವಾಸ ಹಿಂಪಡೆಯುವಲ್ಲಿ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಯಶಸ್ವಿಯಾಗಿದ್ದರು. ಆದರೆ ಪಟ್ಟು ಬಿಡದ ಅಣ್ಣಾ ಈಗ ಮತ್ತೊಮ್ಮೆ ಉಪವಾಸಕ್ಕೆ ಹೊರಟಿದ್ದಾರೆ.
2011 ರಲ್ಲಿ ಲೋಕಪಾಲ ಮಸೂದೆಗೆ ಒಪ್ಪಿಗೆ ನೀಡುವಂತೆ ಅಣ್ಣಾ ಹಜಾರೆ ಆರಂಭಿಸಿದ್ದ ಉಪವಾಸ ಸತ್ಯಾಗ್ರಹ ಅಂದಿನ ಯುಪಿಎ ಸರ್ಕಾರದ ಮೇಲೆ ಸಾಕಷ್ಟು ಪ್ರಭಾವ ಬೀರಿತ್ತು. ಇಂದಿನಿಂದ ಅಣ್ಣಾ ಆರಂಭಿಸಿರುವ ಉಪವಾಸ ಸತ್ಯಾಗ್ರಹವೂ ಮುಂಬರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ಈಗಿನ ಎನ್ ಡಿಎ ಸರ್ಕಾರದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದರೆ ಅಚ್ಚರಿಯಿಲ್ಲ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications