• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ದೇಶಕ್ಕಾಗಿ ಪ್ರಾಣ ಪಣಕ್ಕಿಟ್ಟವರ ಪೋಷಕರಿಗೆ ಕೇಂದ್ರದಿಂದ ಮುಳ್ಳಿನ ಬೇಲಿ"

|

ನವದೆಹಲಿ, ಮಾರ್ಚ್. 06: ಭಾರತದಲ್ಲಿ ಜಾರಿಗೊಳಿಸಲು ಹೊರಟಿರುವ ವಿವಾದಿತ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ರೈತರ ಪ್ರತಿಭಟನೆ ಪರವಾಗಿ ಮಾತನಾಡಿರುವ ಸಂಸದ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕಳೆದ ನವೆಂಬರ್.26ರಿಂದ ದೆಹಲಿಯ ಮೂರು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದಿಗೆ(ಮಾರ್ಚ್.06) 100 ದಿನ ಪೂರೈಸಿದ ಹಿನ್ನೆಲೆ ರಾಹುಲ್ ಗಾಂಧಿಯವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ದೇಶದ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿರುವ ಜನರಿಗೆ ಕೇಂದ್ರ ಸರ್ಕಾರವು ದೆಹಲಿಯಲ್ಲಿ ಬೇಲಿ ಹಾಕುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂರು ದಿನ ಮುಟ್ಟಿದ ಪ್ರತಿಭಟನೆ; ಕೇಂದ್ರದ ವಿರುದ್ಧ ಕರಾಳ ದಿನಾಚರಣೆ

"ಯಾರ ಮಕ್ಕಳು ದೇಶದ ಗಡಿಯಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ದುಡಿಯುತ್ತಿದ್ದಾರೋ.. ಅಂಥವರಿಗೆ ದೆಹಲಿಯಲ್ಲಿ ಮುಳ್ಳಿನ ಬೇಲಿಯನ್ನು ಹಾಕಲಾಗುತ್ತಿದೆ. ಅನ್ನದಾತರು ತಮ್ಮ ಹಕ್ಕುಗಳಿಗೆ ಹೋರಾಟ ನಡೆಸುತ್ತಿದ್ದರೆ, ಸರ್ಕಾರವು ಅವರ ಮೇಲೆ ದೌರ್ಜನ್ಯ ನಡೆಸುತ್ತಿದ" ಎಂದು ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಉಲ್ಲೇಖಿಸಿದ್ದಾರೆ.

ದೆಹಲಿ ಮೂರು ಗಡಿಯಲ್ಲಿ ಪ್ರತಿಭಟನೆ:

ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 100 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ.

English summary
100 Days For Farmer Protest: Annadaatas Demand Their Rights, Govt Commits Atrocities, Rahul Gandhi Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X