ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಸಿಎಎ ಪರ ಮತ್ತು ವಿರೋಧಿ ಗುಂಪುಗಳ ನಡುವೆ ಕಲ್ಲುತೂರಾಟ

|
Google Oneindia Kannada News

ನವದೆಹಲಿ, ಫೆಬ್ರವರಿ.23: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರೋಧಿ ಹೋರಾಟ ಮುಂದುವರಿದಿದೆ. ದೆಹಲಿಯ ಜಫ್ರಾಬಾದ್ ನ ಮೌಜ್ ಪುರ್ ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

ಸಿಎಎ ಪರ ಮತ್ತು ಸಿಎಎ ವಿರೋಧಿ ಗುಂಪಿನ ಜನರ ನಡುವೆ ಕಲ್ಲು ತೂರಾಟ ನಡೆದಿದ್ದು, ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು, ಉದ್ರಿಕ್ತರ ಗಂಪುನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Anti-CAA Protest: Stone Pelting Between Two Groups In Maujpur Area

 ದಕ್ಷಿಣ ಆಫ್ರಿಕಾದ ಪರ್ವತ ಏರಿದ ಬಾಲಕಿಯನ್ನು ಹೊಗಳಿದ ಮೋದಿ ದಕ್ಷಿಣ ಆಫ್ರಿಕಾದ ಪರ್ವತ ಏರಿದ ಬಾಲಕಿಯನ್ನು ಹೊಗಳಿದ ಮೋದಿ

ಇನ್ನೊಂದೆಡೆ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು 500ಕ್ಕೂ ಹೆಚ್ಚು ಪ್ರತಿಭಟನಾನಿರತ ಮಹಿಳೆಯರು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

Anti-CAA Protest: Stone Pelting Between Two Groups In Maujpur Area

ಜಫ್ರಾಬಾದ್ ಮೆಟ್ರೋ ನಿಲ್ದಾಣ ಬಂದ್:

ಶನಿವಾರ ರಾತ್ರಿ ವೇಳೆಯೇ ರಸ್ತೆಗಿಳಿದ ಪ್ರತಿಭಟನಾನಿರತರು ತ್ರಿವರ್ಣ ಧ್ವಜವನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇದರಿಂದ ದೆಹಲಿಯ ಸೀಲಾಂಪುರ್, ಮೌಜ್ ಪುರ್ ಮತ್ತು ಯಮುನಾ ವಿಹಾರ್ ರಸ್ತೆಗಳ ನಡುವಿನ ಸಂಪರ್ಕ ಬಂದ್ ಆಗಿದೆ. ದೆಹಲಿಯ ಜಫ್ರಾಬಾದ್ ಮೆಟ್ರೋ ರೈಲ್ವೆ ನಿಲ್ದಾಣದ ಎದುರು ನೆರೆದ ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಇದರಿಂದ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್ ಮಾಡಲಾಗಿದೆ.

English summary
Anti-CAA Protest: Stone Pelting Between Two Groups In Delhi's Maujpur Area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X