ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧೋನಿ, ಗಂಭೀರ್ -ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು!

|
Google Oneindia Kannada News

Recommended Video

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂ ಎಸ್ ಧೋನಿ- ಗೌತಮ್ ಗಂಭೀರ್ | Oneindia Kannada

ನವದೆಹಲಿ, ಅಕ್ಟೋಬರ್ 22: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿರುವ ಬಿಜೆಪಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.

ಅದಕ್ಕಾಗಿ ಕೆಲವು ಸೆಲೆಬ್ರಿಟಿ ಕ್ರಿಕೆಟ್ ಸ್ಟಾರ್ ಗಳನ್ನೂ ಅದು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಪ್ರಯತ್ನದಲ್ಲಿ ನಿರತವಾಗಿದೆ. ಅದರಲ್ಲಿ ಪ್ರಮುಖವಾಗಿ ಭಾರತದ ಮಾಜಿ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಎಂಬ ಮಾಹಿತಿಯನ್ನು ಬಿಜೆಪಿಯ ಆಪ್ತ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ: ಚಿದಂಬರಂ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ: ಚಿದಂಬರಂ

ಜೊತೆಗೆ ಭಾರತದ ಪರ ಹಲವಾರು ಟೆಸ್ಟ್ ಮತ್ತು ಏಕ ದಿನ ಪಂದ್ಯಗಳನ್ನು ಆಡಿರುವ ಮತ್ತೊಬ್ಬ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರನ್ನೂ ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ. ಅಕಸ್ಮಾತ್ ಈ ಸುದ್ದಿ ಸತ್ಯವೇ ಆದರೆ ಈ ಇಬ್ಬರು ಕ್ರಿಕೆಟ್ ದಿಗ್ಗಜರನ್ನು ಸಂಸತ್ತಿನಲ್ಲಿ ನೋಡಬಹುದಾದ ದಿನಗಳು ದೂರವಿಲ್ಲ!

ಮಹೇಂದ್ರ ಸಿಂಗ್ ಧೋನಿ ಅವರು ಇನ್ನೂ ಕ್ರಿಕೆಟ್ ಆಡುತ್ತಿದ್ದರೆ, ಗೌತಮ್ ಗಂಭೀರ್ ಅವರು ಟಿ20ಯಿಂದಲೂ ದೂರ ಸರಿದಿದ್ದಾರೆ. ಸದ್ಯಕ್ಕೆ ಅವರು ಯುವ ಆಟಗಾರರ ತರಬೇತಿಯಲ್ಲಿ ಮಾತ್ರ ತೊಡಗಿಕೊಂಡಿದ್ದಾರೆ.

ಜಾರ್ಖಂಡ್ ನಿಂದ ಸ್ಪರ್ಧಿಸಲಿದ್ದಾರೆ ಧೋನಿ!

ಜಾರ್ಖಂಡ್ ನಿಂದ ಸ್ಪರ್ಧಿಸಲಿದ್ದಾರೆ ಧೋನಿ!

ಬಿಜೆಪಿಯ ಹಿರಿಯ ನಾಯಕರೇ ಒಬ್ಬರು ಖಚಿತಪಡಿಸಿರುವ ಪ್ರಕಾರ ಧೋನಿ ಜಾರ್ಖಂಡ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಅವರು ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಸಹ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಗೆ ಸಜ್ಜಾದ ಕೇಜ್ರಿವಾಲ್, ಬಿಜೆಪಿ ಗಡಗಡ?!ಲೋಕಸಭಾ ಚುನಾವಣೆಗೆ ಸಜ್ಜಾದ ಕೇಜ್ರಿವಾಲ್, ಬಿಜೆಪಿ ಗಡಗಡ?!

ದೆಹಲಿಯಿಂದ ಗಂಭೀರ್?

ದೆಹಲಿಯಿಂದ ಗಂಭೀರ್?

ಗೌತಮ್ ಗಂಭೀರ್ ಅವರು ದೆಹಲಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ಅವರ ಸಾಧನೆಯ ಬಗ್ಗೆ ಬಿಜೆಪಿಗೆ ತೃಪ್ತಿ ಇಲ್ಲದ ಕಾರಣ, ಅವರ ಕ್ಷೇತ್ರದಲ್ಲಿ ಗಂಭೀರ್ ಅವರನ್ನು ಕಣಕ್ಕಿಳಿಸಿಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.

ಬೆಳಗಾವಿ ರಾಜಕಾರಣದಿಂದ ಹೊಸ ಸುದ್ದಿಯೊಂದು ಹೊರಬಂತು!

ಧೋನಿ ಆಯ್ಕೆಗೆ ಕಾರಣವೇನು?

ಧೋನಿ ಆಯ್ಕೆಗೆ ಕಾರಣವೇನು?

ಧೋನಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿ ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಮೂಲಕ ಅವರು ದಕ್ಷಿಣ ಭಾರತದಲ್ಲೂ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ದೇಶದಾದ್ಯಂತ ಅಭಿಮಾನಿಗಳನ್ನು ಹೊಂಡಿರುವ ಅವರು ಬಿಜೆಪಿಯಿಂದ ಸ್ಪರ್ಧಿಸುವುದರಿಂದ ಮತ್ತು ಬಿಜೆಪು ಸ್ಟಾರ್ ಕ್ಯಾಂಪೇನರ್ ಆಗುವುದರಿಂದ ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ.

ಬಿಜೆಪಿಯಿಂದ ಕುಮಾರ್ ವಿಶ್ವಾಸ್ ಸ್ಪರ್ಧೆ?

ಬಿಜೆಪಿಯಿಂದ ಕುಮಾರ್ ವಿಶ್ವಾಸ್ ಸ್ಪರ್ಧೆ?

ಆಮ್ ಆದ್ಮಿ ಪಕ್ಷದ ನಾಯಕರಾಗಿದ್ದ ಕುಮಾರ್ ವಿಶ್ವಾಸ್, ಪಕ್ಷದ ನಾಯಕರ ಬಗ್ಗೆ ಅತೃಪ್ತಿ ಹೊಂದಿ, ಎಎಪಿಯನ್ನು ತೊರೆದಿದ್ದಾರೆ. ಬಿಜೆಪಿ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಅವರಿಗೂ ಟಿಕೆಟ್ ನೀಡಲು ಬಿಜೆಪಿ ಚಿಂತಿಸುತ್ತಿದೆ. ಉತ್ತಮ ಕವಿ, ವಾಗ್ಮಿಯೂ ಆಗಿರುವ ಕುಮಾರ್ ವಿಶ್ವಾಸ್ ಅವರು ಬಿಜೆಪಿಗೆ ಅತ್ಯುತ್ತಮ ಆಸ್ತಿಯಾಗಬಲ್ಲರು ಎಂಬುದು ಬಿಜೆಪಿಯ ಲೆಕ್ಕಾಚಾರ.

English summary
The Bharatiya Janata Party is likely to field celebrities such as cricketers Gautam Gambhir and Mahendra Singh Dhoni in the 2019 Lok Sabha elections, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X