ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂ ಕೋರ್ಟ್ ಮೊರೆ ಹೋದ ಅರ್ನಬ್ ಗೋಸ್ವಾಮಿ

|
Google Oneindia Kannada News

ನವದೆಹಲಿ, ನವೆಂಬರ್ 10: ಒಳಾಂಗಣ ವಿನ್ಯಾಸಕ ಅನ್ವಯ್ ನಾಯ್ಕ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಿರೂಪಕ ಹಾಗೂ ರಿಪಬ್ಲಿಕ್ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮಧ್ಯಂತರ ಜಾಮೀನಿಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸೋಮವಾರ ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಜೊತೆಗೆ ಸಿಆರ್ ಪಿಸಿ ಸೆಕ್ಷನ್ 439 ಅಡಿ ಜಾಮೀನು ಮನವಿ ಮಾಡಲು ಅಲಿಬಾಗ್ ನ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅಭ್ಯಂತರವಿಲ್ಲ ಎಂದು ನ್ಯಾಯಪೀಠ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಅರ್ನಬ್ ಗೋಸ್ವಾಮಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಅರ್ನಬ್ ಗೋಸ್ವಾಮಿಗೆ ಹಿನ್ನಡೆ: ಜಾಮೀನು ಅರ್ಜಿ ತಿರಸ್ಕೃತಅರ್ನಬ್ ಗೋಸ್ವಾಮಿಗೆ ಹಿನ್ನಡೆ: ಜಾಮೀನು ಅರ್ಜಿ ತಿರಸ್ಕೃತ

ಮಹಾರಾಷ್ಟ್ರ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿ ಹಿಂಸಿಸಿದ್ದಾರೆ ಎಂದು ಜಾಮೀನು ಅರ್ಜಿಯಲ್ಲಿ ಅನರ್ಬ್ ಆರೋಪಿಸಿದ್ದರು. ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಆದರೆ ಬಾಂಬೆ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ಅರ್ಜಿ ನಿರಾಕರಣೆ ನಂತರ ಈ ಬೆಳವಣಿಗೆ ನಡೆದಿದೆ.

 Arnab Goswami Moved To Supreme Court For Interimn Bail

2018ರಲ್ಲಿ ಒಳಾಂಗಣ ವಿನ್ಯಾಸಕ ಅನ್ವಯ್ ನಾಯ್ಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಅವರನ್ನು ನ.4ರಂದು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿತ್ತು.

English summary
Arnab Goswami moved to supreme court after bombay high court refusing interimn bail
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X