• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಿತ್ಯದ ಕೋವಿಡ್ ಪ್ರಕರಣಗಳಲ್ಲಿ ಶೇ.2.4ರಷ್ಟು ಬೆಳವಣಿಗೆ: ಲವ್ ಅಗರ್ವಾಲ್

|

ನವದೆಹಲಿ, ಮೇ 05: ಭಾರತದಲ್ಲಿ ನಿತ್ಯದ ಕೋವಿಡ್ ಪ್ರಕರಣಗಳಲ್ಲಿ ಶೇ.2.4ರಷ್ಟು ಬೆಳವಣಿಗೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.

ದೇಶದಲ್ಲಿ ಸಾವಿನ ಹೆಚ್ಚಳವೂ ಕಂಡು ಬಂದಿದೆ, ಮಹಾರಾಷ್ಟ್ರ, ಆಂಧ್ರಪ್ರದೇಶ, ದೆಹಲಿ, ಕರ್ನಾಟಕ, ಹರ್ಯಾಣದಲ್ಲಿ ಹೆಚ್ಚಿನ ಸಾವು ಸಂಭವಿಸಿರುವ ವರದಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ ಕೊರೊನಾ 3ನೇ ಅಲೆ ತಡೆಗೆ ಲಾಕ್‌ಡೌನ್ ಅನಿವಾರ್ಯ: ಏಮ್ಸ್ ನಿರ್ದೇಶಕ ಭಾರತದಲ್ಲಿ ಕೊರೊನಾ 3ನೇ ಅಲೆ ತಡೆಗೆ ಲಾಕ್‌ಡೌನ್ ಅನಿವಾರ್ಯ: ಏಮ್ಸ್ ನಿರ್ದೇಶಕ

ಆಸ್ಪತ್ರೆಗಳು ಕೇಳಿರುವ ವೈದ್ಯಕೀಯ ಉಪಕರಣಗಳನ್ನು ಕಳುಹಿಸಲಾಗಿದೆ, ನಮ್ಮ ತಾಂತ್ರಿಕ ವಿಭಾಗದ ವಿಭಾಗವು ಕೆಲವು ಮಾರ್ಗಸೂಚಿಯನ್ನು ಮಾಡಿದೆ. ಯಾವ ಆಸ್ಪತ್ರೆಗೆ ಸೂಕ್ತವಾಗಿದೆ ಎಂಬುದನ್ನು ಗಮನಿಸಲಾಗುತ್ತದೆ. ತಕ್ಷಣಕ್ಕೆ ಅಗತ್ಯವಿರುವ ಆಸ್ಪತ್ರೆಗೆ ಕಳುಹಿಸಲಾಗುತ್ತದೆ ಎಂದರು.

ಭಾರತದಲ್ಲಿ ಕೊರೊನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,82 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 3,82,315 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ದೇಶದಲ್ಲಿ 3,780 ಮಂದಿ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 2,26,188ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,87,229ಕ್ಕೆ ಏರಿಕೆಯಾಗಿದೆ.

English summary
that around 2.4% day on day growth in COVID cases has been noticed in India. “Around 2.4% day on day growth in COVID cases has been noticed. An increase in deaths has been noticed too.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X