ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರುಣ್ ಜೇಟ್ಲಿ ಆರೋಗ್ಯ ಗಂಭೀರ: ಏಮ್ಸ್‌ನತ್ತ ಹರ್ಷವರ್ಧನ್, ಅಮಿತ್ ಶಾ

|
Google Oneindia Kannada News

Recommended Video

ಕಳಚುತ್ತಾ ಬಿಜೆಪಿಯ ಮತ್ತೊಂದು ಹಿರಿಯ ಕೊಂಡಿ..?

ನವದೆಹಲಿ, ಆಗಸ್ಟ್ 17: ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸಚಿವ ಹರ್ಷವರ್ದನ್ ರಾಥೋಡ್ ಹಾಗೂ ಗೃಹ ಸಚಿವ ಅಮಿತ್ ಶಾ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಶನಿವಾರ ಬೆಳಗಿನ ಜಾವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ರಾತ್ರಿ 11 ಗಂಟೆ ವೇಳೆಗೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ, ಏಮ್ಸ್ ನತ್ತ ಕೋವಿಂದ್ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ, ಏಮ್ಸ್ ನತ್ತ ಕೋವಿಂದ್

ಉಸಿರಾಟ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದ ಅರುಣ್ ಜೇಟ್ಲಿ ಅವರನ್ನು ಆಗಸ್ಟ್ 9 ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಮಾಡಿದ್ದರು.

Arun Jaitley Condition Becomes Serious Amit Shah Rush To AIIMS

ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಸುಮಾರು 1 ಗಂಟೆಗಳ ಕಾಲ ಆಸ್ಪತ್ರೆಯಲ್ಲೇ ಇದ್ದ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬಳಿಕ 12 ಗಂಟೆಗೆ ಆಸ್ಪತ್ರೆಯಿಂದ ನಿರ್ಗಮಿಸಿದರು. ಮತ್ತೆ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಆಸ್ಪತ್ರೆಗೆ ಮೋದಿ ಹಾಗೂ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಅರುಣ್ ಜೇಟ್ಲಿ ಜೊತೆ ಜಗಳಕ್ಕಾಗಿ ಕಾಯುತ್ತಿದ್ದೇನೆ: ಶಶಿ ತರೂರ್ ಅರುಣ್ ಜೇಟ್ಲಿ ಜೊತೆ ಜಗಳಕ್ಕಾಗಿ ಕಾಯುತ್ತಿದ್ದೇನೆ: ಶಶಿ ತರೂರ್

ಕಳೆದ ಎನ್‍ಡಿಎ ಸರ್ಕಾರದ ಅವಧಿಯ ಅಂತಿಮ ಬಜೆಟ್ ವೇಳೆಯೂ ಅರುಣ್ ಜೇಟ್ಲಿ ಅವರು ಆರೋಗ್ಯ ಸಮಸ್ಯೆ ಎದುರಿಸಿದ್ದ ಪರಿಣಾಮ ರೈಲ್ವೇ ಸಚಿವರಾಗಿದ್ದ ಪಿಯೂಷ್ ಗೋಯೆಲ್ ಅವರು ಬಜೆಟ್ ಮಂಡನೆ ಮಾಡಿದ್ದರು.

ಇದಕ್ಕೂ ಮುನ್ನ ಮೂತ್ರಪಿಂಡ ಸಮಸ್ಯೆಯಿಂದಾಗಿ ಮೂರು ತಿಂಗಳ ಕಾಲ ಸುದೀರ್ಘ ರಜೆ ಪಡೆದಿದ್ದ ಅರುಣ್ ಜೇಟ್ಲಿ ಅವರು ಆ ಬಳಿಕ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು.

ಈ ಅವಧಿಯಲ್ಲೂ ಸಚಿವ ಪಿಯೂಷ್ ಗೋಯಲ್ ಅವರು ಇಲಾಖೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.

English summary
Arun Jaitleys Condition Becomes Serious Amit Shah and Harsh Vardhan Rush To AIIMS in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X