ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರುಣ್ ಜೇಟ್ಲಿ ಅವರಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ

|
Google Oneindia Kannada News

ನವದೆಹಲಿ, ಮೇ 14: ವಿತ್ತ ಸಚಿವ ಅರುಣ್ ಜೇಟ್ಲಿ ಅವರು ದೆಹಲಿಯ ಏಮ್ಸ್ All India Institutes of Medical Science) ಆಸ್ಪತ್ರೆಯಲ್ಲಿ ಮೂತ್ರಪಿಂಡ(ಕಿಡ್ನಿ) ಕಸಿ ಶಸ್ತ್ರಚಿಕಿತ್ಸೆಗೊಳಪಟ್ಟಿದ್ದಾರೆ.

ಮೂತ್ರಪಿಂಡ ಸಂಬಂಧೀ ಸಮಸ್ಯೆಯಿಂದ ಬಳಲುತ್ತಿದ್ದ 65 ವರ್ಷ ವಯಸ್ಸಿನ ಬಿಜೆಪಿ ಮುಖಂಡ ಜೇಟ್ಲಿ, ಯಶಸ್ವೀ ಕಸಿ ಶಸ್ತ್ರಚಿಕಿತ್ಸೆಗೊಳಪಟ್ಟಿದ್ದಾರ. 'ಅವರ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ" ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಶನಿವಾರ(ಮೇ 12) ರಂದು ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿನಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು.

Arun Jaitley underwent Renal Transplant surgery at AIIMS

ಇದಕ್ಕೂ ಮುನ್ನ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಸೆಪ್ಟೆಂಬರ್ 2014 ರಲ್ಲಿ ಬ್ಯಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೊಳಪಟ್ಟಿದ್ದರು.

ಚಿಕಿತ್ಸೆಯ ನಿಮಿತ್ತ ಅವರು ತಮ್ಮ ಲಂಡನ್ ಭೇಟಿಯನ್ನು ರದ್ದುಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

English summary
Finance Minister Arun Jaitley underwent Renal Transplant surgery at AIIMS hospital Delhi. 'The surgery was successful. He is stable & recovering well' hospital sources told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X