ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಸ್ಕ್ ಧರಿಸದವರಿಗೆ ದಂಡದ ಮೊತ್ತ 500 ರಿಂದ 2000 ರೂಗೆ ಏರಿಕೆ

|
Google Oneindia Kannada News

ನವದೆಹಲಿ, ನವೆಂಬರ್ 20: ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಜನರು ಹೊರಗೆ ಓಡಾಡುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಆದರೆ ಅನೇಕರು ಅದನ್ನು ನಿರ್ಲಕ್ಷಿಸುವ ಮೂಲಕ ತಾವು ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಅಥವಾ ಸೋಂಕು ಹರಡಿಸುವ ಅಪಾಯಕಾರಿ ಕೆಲಸವನ್ನೂ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿನ ಸಂಖ್ಯೆ ಹೆಚ್ಚುತ್ತಿದ್ದು, ಅದಕ್ಕಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Recommended Video

Corona ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕಠಿಣ ನಿರ್ಧಾರ | Oneindia Kannada

ಮಾಸ್ಕ್ ಧರಿಸದೆ ಸಿಕ್ಕಿಬೀಳುವ ಜನರಿಗೆ ವಿಧಿಸಲಾಗುವ ದಂಡ ಪ್ರಮಾಣವನ್ನು 2,000 ರೂ.ಗೆ ಹೆಚ್ಚಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಮಾಸ್ಕ್ ಧರಿಸದವರಿಗೆ 500 ರೂ. ದಂಡ ವಿಧಿಸಲಾಗುತ್ತಿದೆ. ಜತೆಗೆ ದೆಹಲಿಯ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ಗಳನ್ನು ವಿತರಿಸುವಂತೆ ಎಲ್ಲ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳಿಗೆ ಅವರು ಮನವಿ ಮಾಡಿದ್ದಾರೆ.

Arvind Kejriwal Announces Rs 2000 Fine For Not Wearing Mask

ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವಂತೆ ಕೋವಿಡ್ ಸಂಖ್ಯೆಯಲ್ಲಿಯೂ ತೀವ್ರ ಏರಿಕೆಯಾಗುತ್ತಿದೆ. ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಜ್ರಿವಾಲ್ ಅನೇಕ ಬಾರಿ ಮನವಿ ಮಾಡಿದ್ದರು. ಆದರೆ ಇದನ್ನು ಜನರು ಗಂಭೀರವಾಗಿ ಪರಿಗಣಿಸದ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರಿಗೆ ದುಬಾರಿ ದಂಡ ವಿಧಿಸುವ ಕಠಿಣ ನಿರ್ಧಾರಕ್ಕೆ ಬರಲಾಗಿದೆ.

ದೆಹಲಿ ಸರ್ಕಾರದ ಆಸ್ಪತ್ರೆಗಳಲ್ಲಿ 663 ಮತ್ತು ಕೇಂದ್ರ ಸರ್ಕಾರ ಸ್ವಾಮ್ಯದ ಆಸ್ಪತ್ರೆಗಳಲ್ಲಿ 750 ಸೇರಿದಂತೆ 1,400ಕ್ಕೂ ಅಧಿಕ ಐಸಿಯು ಹಾಸಿಗೆಗಳಿಗೆ ಸಿದ್ಧತೆ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಮೀಸಲಿಡುವ ಐಸಿಯು ಹಾಸಿಗೆಗಳ ಪ್ರಮಾಣವನ್ನು ಶೇ 50 ರಿಂದ ಶೇ 60ಕ್ಕೆ ಹೆಚ್ಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ 80ರಷ್ಟು ಐಸಿಯು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿರಿಸುವಂತೆ ಶೀಘ್ರದಲ್ಲಿಯೇ ಆದೇಶ ಜಾರಿ ಮಾಡಲಾಗುತ್ತದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

English summary
Delhi CM Arvind Kejriwal has announced the increase in fine for not wearing mask to Rs 2000 from Rs 500.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X