ಕೇಜ್ರಿವಾಲ್, ಅಮಿತ್ ಶಾ ಭೇಟಿ: ದೆಹಲಿ ಅಭಿವೃದ್ಧಿ ಕುರಿತು ಚರ್ಚೆ
ನವದೆಹಲಿ, ಫೆಬ್ರವರಿ 19: ಅರವಿಂದ್ ಕೇಜ್ರಿವಾಲ್ ದೆಹಲಿಯ ಮುಖ್ಯಮಂತ್ರಿಯಾಗಿ ಮೂರನೇ ಬಾರಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಜತೆ ನಡೆದ ಚರ್ಚೆ ಫಲಕಾರಿಯಾಗಿದೆ. ದೆಹಲಿ ಎದುರಿಸುತ್ತಿರುವ ಸಂಕೀರ್ಣ ಸಮಸ್ಯೆಗಳ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಅಲ್ಲದೆ ದೆಹಲಿ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದೆ.
ಇದಕ್ಕೆ ಸ್ಪಂದಿಸಿದ ಗೃಹ ಸಚಿವರು ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಜೋಡಿಸುತ್ತದೆ ಎನ್ನುವ ಭರವಸೆ ನೀಡಿದರು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನವದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಗೃಹ ಸಚಿವರ ನಿವಾಸಕ್ಕೆ ತೆರಳಿ 20 ನಿಮಿಷಗಳ ಕಾಲ ಅವರು ಚರ್ಚೆ ನಡೆಸಿದರು.ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮೊದಲ ಬಾರಿಗೆ ಕೇಂದ್ರ ಗೃಹ ಸಚಿವರ ಜತೆ ಮಾತುಕತೆ ನಡೆಸಿದರು. ಚುನಾವಣೆ ವೇಳೆ ಬಿಜೆಪಿ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.












Click it and Unblock the Notifications