ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಜ್ರಿವಾಲ್, ಅಮಿತ್ ಶಾ ಭೇಟಿ: ದೆಹಲಿ ಅಭಿವೃದ್ಧಿ ಕುರಿತು ಚರ್ಚೆ

|
Google Oneindia Kannada News

ನವದೆಹಲಿ, ಫೆಬ್ರವರಿ 19: ಅರವಿಂದ್ ಕೇಜ್ರಿವಾಲ್ ದೆಹಲಿಯ ಮುಖ್ಯಮಂತ್ರಿಯಾಗಿ ಮೂರನೇ ಬಾರಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರ ಜತೆ ನಡೆದ ಚರ್ಚೆ ಫಲಕಾರಿಯಾಗಿದೆ. ದೆಹಲಿ ಎದುರಿಸುತ್ತಿರುವ ಸಂಕೀರ್ಣ ಸಮಸ್ಯೆಗಳ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಅಲ್ಲದೆ ದೆಹಲಿ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದೆ.

ಕೇಜ್ರಿ ಕ್ಯಾಬಿನೆಟ್ 3.0: ಕೋಟ್ಯಧಿಪತಿಗಳೆಷ್ಟು? ಕ್ರಿಮಿನಲ್ ಆರೋಪಿಗಳೆಷ್ಟು?ಕೇಜ್ರಿ ಕ್ಯಾಬಿನೆಟ್ 3.0: ಕೋಟ್ಯಧಿಪತಿಗಳೆಷ್ಟು? ಕ್ರಿಮಿನಲ್ ಆರೋಪಿಗಳೆಷ್ಟು?

ಇದಕ್ಕೆ ಸ್ಪಂದಿಸಿದ ಗೃಹ ಸಚಿವರು ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಜೋಡಿಸುತ್ತದೆ ಎನ್ನುವ ಭರವಸೆ ನೀಡಿದರು ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Arvind Kejriwal Meets Amit Shah

ನವದೆಹಲಿಯ ಕೃಷ್ಣ ಮೆನನ್​ ಮಾರ್ಗದಲ್ಲಿರುವ ಗೃಹ ಸಚಿವರ ನಿವಾಸಕ್ಕೆ ತೆರಳಿ 20 ನಿಮಿಷಗಳ ಕಾಲ ಅವರು ಚರ್ಚೆ ನಡೆಸಿದರು.ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರು ಮೊದಲ ಬಾರಿಗೆ ಕೇಂದ್ರ ಗೃಹ ಸಚಿವರ ಜತೆ ಮಾತುಕತೆ ನಡೆಸಿದರು. ಚುನಾವಣೆ ವೇಳೆ ಬಿಜೆಪಿ ಅರವಿಂದ್​ ಕೇಜ್ರಿವಾಲ್​ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

English summary
Delhi Chief Minister Arvind Kejriwal met Union Home Minister Amit Shah at the Union Home Minister’s residence on Wednesday afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X