ಕೇಜ್ರಿವಾಲ್ ಪ್ರಮಾಣ ವಚನಕ್ಕೆ ಮೋದಿ ಗೈರು
ನವದೆಹಲಿ, ಫೆ. 12 : ದೆಹಲಿ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ಆದರೆ, ಮೋದಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ.
ಗುರುವಾರ ಬೆಳಗ್ಗೆ 10.30ಕ್ಕೆ ದೆಹಲಿಯ 7 ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಮನಿಷ್ ಸಿಸೋಡಿಯಾ ಸಹ ಕೇಜ್ರಿವಾಲ್ ಜೊತೆಗಿದ್ದರು. [ಅರವಿಂದ್ ಕೇಜ್ರಿವಾಲ್ ಬುಧವಾರದ ದಿನಚರಿ]

ಪ್ರಧಾನಿ ಭೇಟಿ ಮಾಡಿದ ಕೇಜ್ರಿವಾಲ್ ಫೆ.14ರಂದು ರಾಮ್‌ಲೀಲಾ ಮೈದಾನದಲ್ಲಿ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ಆದರೆ, ಮಹಾರಾಷ್ಟ್ರ ಪ್ರವಾಸಕ್ಕೆ ತೆರಳಲಿರುವ ಮೋದಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ. [ಪ್ರತಿಕ್ರಿಯೆ: ಆಮ್ ಆದ್ಮಿ ಪಕ್ಷಕ್ಕೆ ಜಯ, ಭ್ರಷ್ಟತೆ ಇನ್ನು ಮಾಯ]
ಮೋದಿ ಭೇಟಿಯ ಬಳಿಕ ಮಾತನಾಡಿದ ಮನಿಷ್ ಸಿಸೋಡಿಯಾ ಅವರು 'ಪ್ರಧಾನಿ ನರೇಂದ್ರ ಮೋದಿ ಅವರು ಮೊದಲೇ ನಿಗದಿಯಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ' ಎಂದು ತಿಳಿಸಿದ್ದಾರೆ ಎಂದರು.

ಪ್ರಧಾನಿ ಭೇಟಿಯ ಸಂದರ್ಭದಲ್ಲಿ ಕೇಜ್ರಿವಾಲ್ ಅವರು ದೆಹಲಿಗೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ಸೇರಿದಂತೆ ಅನೇಕ ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ದೆಹಲಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಿಸೋಡಿಯಾ ಅವರು ತಿಳಿಸಿದರು.












Click it and Unblock the Notifications