ಮಹಿಳೆಯರಿಗೆ ಬಸ್, ಮೆಟ್ರೋ ಪ್ರಯಾಣ ಉಚಿತ: ಕೇಜ್ರಿವಾಲ್ ಹೊಸ ಪ್ಲ್ಯಾನ್

ನವದೆಹಲಿ, ಜೂನ್ 03: ದೆಹಲಿಯಲ್ಲಿ 2020 ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ತಯಾರಿ ಎಂಬಂತೆ ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ಪ್ರಯಾಣ ಸೌಲಭ್ಯವನ್ನು ಉಚಿತವಾಗಿ ನೀಡಲು ದೆಹಲಿ ಸರ್ಕಾರ ಚಿಂತನೆ ನಡೆಸಿದೆ.

ಮಹಿಳೆಯರು ಸಾರ್ವಜನಿಕ ಸಾರಿಗೆಯನ್ನು ಬಳಸುವುದನ್ನು ಹೆಚ್ಚಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.

ಜೂನ್ 3 ರಂದು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿರುವ ಅವರು, "ದೆಹಲಿ ಸಾರಿಗೆ ನಿಗಮ ಮತ್ತು ದೆಹಲಿ ಮೆಟ್ರೋದಲ್ಲಿ ಹೆಚ್ಚು ಹೆಚ್ಚು ಮಹಿಳೆಯರು ಸಂಚರಿಸುವ ಮೂಲಕ ಸ್ವಂತ ವಾಹನ ಬಳಕೆಯನ್ನು ಕಡಿಮೆ ಮಾಡಬೇಕಿದೆ. ಇದರಿಂದ ಮಾಲಿನ್ಯ ನಿಯಂತ್ರಣವೂ ಸಾಧ್ಯ, ಜೊತೆಗೆ ಮಹಿಳೆಯರಿಗೂ ಉತ್ತೇಜನ ಸಿಕ್ಕಂತಾಗುತ್ತದೆ" ಎಂದಿದ್ದಾರೆ.

Arvind Kejriwal planning to make metro and bus travels free for women in Delhi

ಅಷ್ಟೇ ಅಲ್ಲದೆ, ಈಗಾಗಲೆ ದೆಹಲಿ ವಿದ್ಯುತ್ ಇಲಾಖೆಯ ಅಧಿಕಾರಿಗಳೊಂದಿಗೆ ಅರವಿಂದ್ ಕೇಜ್ರಿವಾಲ್ ಅವರು ಮಾತುಕತೆ ನಡೆಸಿದ್ದು, ಸದ್ಯದಲ್ಲೇ ವಿದ್ಯುತ್ ದರವನ್ನೂ ಕಡಿತಗೊಳಿಸಲಾಗುವುದು ಎಂದು ಅವಅರು ತಿಳಿಸಿದ್ದಾರೆ.

2020 ರಲ್ಲಿ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಲೋಕಸಭೆ ಚುನಾವಣೆಯ ಕಳಪೆ ಪ್ರದರ್ಶನದಿಂದ ಆತಂಕಗೊಂದಿರುವ ಎಎಪಿ ಈಗಿನಿಂದಲೇ ವಿಧಾನಸಭೆ ಚುನಾವಣೆಯ ಗೆಲುವಿಗೆ ಪ್ರಯತ್ನ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+