• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇಂದ್ರ ಸರ್ಕಾರದ ಆದೇಶ ಪಾಲನೆ: ಇದು ವಾದ ಮಾಡುವ ಸಮಯವಲ್ಲ ಎಂದ ಕೇಜ್ರಿವಾಲ್

|

ನವದೆಹಲಿ, ಜೂನ್ 10: ಇದು ವಾಗ್ವಾದ ಮಾಡುವ ಸಮಯವನ್ನು ಸರ್ಕಾರದ ಎಲ್ಲಾ ಆದೇಶವನ್ನು ಪಾಲಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನೀಡಿರುವ ಆದೇಶಗಳನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

   June is going to be a menacing month in terms of Corona | Oneindia Kannada

   ದೆಹಲಿಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಸರ್ಕಾರಕ್ಕೆ ಹಿಂದೆಂದೂ ಕಾರಣದಂತಹ ಸವಾಲು ಎದುರಾಗಿದೆ. ಈ ಸಮಯದಲ್ಲಿ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಟ್ಟು, ಮಹಾಮಾರಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದು ಹೇಳಿದ್ದಾರೆ.

   ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಸೋಂಕಿಲ್ಲ

   ದೆಹಲಿ ಸರ್ಕಾರದ ಅಧೀನದಲ್ಲಿರುವ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ದೆಹಲಿ ಜನರಿಗೆ ಮಾತ್ರ ಚಿಕಿತ್ಸೆ ನೀಡುವುದಾಗಿ ಕೇಜ್ರಿವಾಲ್ ಹೇಳಿದ್ದರು. ಈ ಆದೇಶವನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ರದ್ದುಗೊಳಿಸಿದ್ದಾರೆ.

   ಅಲ್ಲದೇ, ದೆಹಲಿಯಲ್ಲಿ ಸಮುದಾಯ ಮಟ್ಟದಲ್ಲಿ ಕೊರೊನಾ ಸೋಂಕು ಹರಡುತ್ತಿದೆ ಎಂಬುದಾಗಿ ಘೋಷಿಸಬೇಕು ಎಂಬ ವಾದವನ್ನು ಕೇಂದ್ರ ಸರ್ಕಾರದ ಅಧಿಕಾರಿಗಳು ತಳ್ಳಿ ಹಾಕಿದ್ದಾರೆ.

   ಬಹುಮತವಿರುವ , ಚುನಾಯಿತ ಸರ್ಕಾರ ಕೈಗೊಂಡ ನಿರ್ಧಾರಗಳನ್ನು ತಿರಸ್ಕರಿಸುವ ಅಧಿಕಾರ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್‌ ಅವರಿಗಿಲ್ಲ ಎಂಬುದಾಗಿ ಕೆಲವರು ಹೇಳುತ್ತಿದ್ದಾರೆ. ಆದರೆ ನಾವು ಕೇಂದ್ರ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರಿಂದ ಬಂದ ಆದೇಶವನ್ನು ಪಾಲಿಸುತ್ತೇವೆ ಎಂದರು.

   ಚಿಕಿತ್ಸೆಗಾಗಿ ಬೇರೆ ರಾಜ್ಯಗಳಿಂದ ದೆಹಲಿಗೆ ಬರುವ ರೋಗಿಗಳಿಗಾಗಿ ಮೂಲಸೌಕರ್ಯವನ್ನು ಹೆಚ್ಚಿಸಬೇಕಾಗುತ್ತದೆ. ಇದಕ್ಕೆ 1.5 ಲಕ್ಷ ಹಾಸಿಗೆಗಳ ಅಗತ್ಯವಿದ್ದು, ಈ ಪೈಕಿ 80 ಸಾವಿರ ಹಾಸಿಗೆಗಳನ್ನು ದೆಹಲಿ ನಿವಾಸಿಗಳಿಗೆ ಮೀಸಲಿಡಲಾಗುತ್ತದೆ ಎಂದು ತಿಳಿಸಿದರು.

   English summary
   Arvind Kejriwal today said the Lieutenant Governor's orders overruling his government's decisions on coronavirus would be strictly followed, without question. "This is not the time for politics.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X