ಹೊಸ ವರ್ಷ ಆರಂಭ, ನನ್ನ ಹೃದಯ ರೈತರೊಂದಿಗಿದೆ ಎಂದ ರಾಹುಲ್

ನವದೆಹಲಿ,ಜನವರಿ 01: ಹೊಸ ವರ್ಷಕ್ಕೆ ಶುಭಾಶಯ ಕೋರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನನ್ನ ಹೃದಯ ರೈತರೊಂದಿಗಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿರುವ ಸಹಸ್ರಾರು ರೈತರಿಗೆ ತನ್ನ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.

ವಿದೇಶ ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ನಾವು ಕಳೆದುಕೊಂಡದ್ದು, ನಮಗಾಗಿ ತ್ಯಾಗ ಮಾಡಿದವರನ್ನು ನೆನಪಿಸಿಕೊಳ್ಳುತ್ತಾ ದೇಶದ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

As A New Year Begins, My Heart With Farmers : Rahul Gandhi

ಅಸಮಾನತೆಯ ಶಕ್ತಿಗಳ ವಿರುದ್ಧ ಘನತೆ ಮತ್ತು ಗೌರವಗಳೊಂದಿಗೆ ಹೋರಾಡುತ್ತಿರುವ ರೈತರು ಮತ್ತು ಕಾರ್ಮಿಕರೊಂದಿಗೆ ನನ್ನ ಹೃದಯವಿರುವುದಾಗಿ ರಾಹುಲ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳ ವಿರುದ್ಧ ರಾಹುಲ್ ಗಾಂಧಿ ಹಲವು ಬಾರಿ ಕಡಿ ಕಾರಿದ್ದಾರೆ. ರೈತರು ಕಳೆದ ಒಂದು ತಿಂಗಳಿನಿಂದ ದೆಹಲಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ರಾಹುಲ್ ಬೆಂಬಲ ನೀಡಿದ್ದಾರೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+