• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿ: ಜೂನ್ ತಿಂಗಳಲ್ಲಿ ಹಿಂದೆಂದೂ ಕಾಣದ ಕನಿಷ್ಠ ಉಷ್ಣಾಂಶ ದಾಖಲು

|
Google Oneindia Kannada News

ನವದೆಹಲಿ, ಜೂನ್ 02: ದೆಹಲಿಯಲ್ಲಿ 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಜೂನ್‌ನಲ್ಲಿ ಎಂದೂ ದಾಖಲಾಗಿರದ ಕನಿಷ್ಠ ಉಷ್ಣಾಂಶ ಇದಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದೆಹಲಿಯಲ್ಲಿ ರಾತ್ರಿ ಎಲ್ಲಾ ಮಳೆ, ಗಾಳಿ, ತಂಪನೆಯ ವಾತಾವರಣವಿದ್ದ ಕಾರಣ ಜೂನ್‌ನಲ್ಲಿ ಎಂದೂ ದಾಖಲಾಗಿರದ ಕನಿಷ್ಠ ವಾತಾವರಣ ದಾಖಲಾಗಿದೆ ಎಂದು ಐಎಂಡಿಯ ಕುಲ್ದೀಪ್ ಶ್ರೀವಾತ್ಸವ್ ಹೇಳಿದ್ದಾರೆ.

ಜೂನ್ 3ರವರೆಗೆ ರಾಜ್ಯದಲ್ಲಿ ಭಾರಿ ಮಳೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಜೂನ್ 3ರವರೆಗೆ ರಾಜ್ಯದಲ್ಲಿ ಭಾರಿ ಮಳೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

2006ರ ಜೂನ್ 17ರಂದು ದೆಹಲಿಯಲ್ಲಿ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಕಲಾಗಿತ್ತು, ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 15.6 ಮಿ.ಮೀ ಮಳೆಯಾಗಿದೆ.

ಇಂದು ಕೂಡ ದೆಹಲಿಯಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆ ಮುಂದುವರೆಯುವ ಸಾಧ್ಯತೆ ಇದೆ. ತೌಕ್ತೆ ಚಂಡಮಮಾರುತದ ಬಳಿಕ ನಿರಂತರವಾಗಿ ಮಳೆಯಾಗುತ್ತಿದೆ.

ಈ ವರ್ಷ ಉತ್ತರಮತ್ತು ದಕ್ಷಿಣ ಭಾರತದಲ್ಲಿ ನೈಋತ್ಯ ಮುಂಗಾರು ಮಳೆ ವಾಡಿಕೆಯಂತೆ ಬರಲಿದ್ದು, ದೇಶದ ಮಧ್ಯ ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನೈಋತ್ಯ ಮುಂಗಾರು 2021ಕ್ಕೆ ಸಂಬಂಧಿಸಿದಂತೆ ಮುನ್ಸೂಚನೆಯ ಎರಡನೇ ಮಾಹಿತಿಯನ್ನು ಬಿಡುಗಡೆ ಮಾಡಿರುವ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ಈ ವರ್ಷ ದೇಶದಲ್ಲಿ ಮುಂಗಾರು ಮಳೆ ವಾಡಿಕೆಯಂತೆ ಸುರಿಯಲಿದೆ ಎಂದಿದ್ದಾರೆ.

English summary
Delhi recorded a minimum of 17.6 degrees Celsius on Tuesday, 10 notches below normal and the lowest temperature ever logged in the month of June, the India Meteorological Department said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X