Breaking: ವರ್ಷಗಳ ರೈತರ ಹೋರಾಟ ಹಿಂಪಡೆದ ಕಿಸಾನ್ ಸಂಘಟನೆ

ನವದೆಹಲಿ, ಡಿಸೆಂಬರ್ 09: ಮೂರು ಕೃಷಿ ಕಾನೂನುಗಳ ವಿರೋಧಿಸಿ ರೈತ ಸಂಘಟನೆಗಳು ವರ್ಷಗಳ ಹಿಂದೆ ಆರಂಭಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.

ಈ ಕುರಿತು ಕಿಸಾನ್ ಸಂಘಟನೆ ಘೋಷಣೆ ಮಾಡಿದೆ, ತೈತರ ಮೇಲಿನ ಕ್ರಿಮಿನಲ್ ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಲಾಗಿತ್ತು. ಸಚಿವ ಅಜಯ್ ಮಿಶ್ರಾ ಅವರನ್ನು ವಜಾ ಮಾಡುವಂತೆ ರೈತರ ಬೇಡಿಕೆ ಇತ್ತು. ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಡಿ.15ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ.

Farmers Protest

ಡಿಸೆಂಬರ್ 11 ರಿಂದ ಸಿಂಘು ಗಡಿಯಿಂದ ರೈತರು ತೆರಳಲಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ರೈತ ಸಂಘಟನೆಗಳ ಮಹತ್ವದ ಸಭೆ ನಡೆದಿದ್ದು, ಇಲ್ಲಿ ಪ್ರತಿಭಟನೆ ಹಿಂಪಡೆದುಕೊಳ್ಳುವ ಅಂತಿಮ ನಿರ್ಧಾರ ಪ್ರಕಟಿಸಲಾಗಿದೆ.

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆ ವಿರುದ್ಧ ಅನ್ನದಾತರು ರಸ್ತೆಗಿಳಿದು ಹೋರಾಟ ನಡೆಸಿದ್ದಾರೆ. ಒಂದು ವರ್ಷದಿಂದ ನಿರಂತರವಾಗಿ ಈ ಹೋರಾಟ ಮುಂದುವರೆದಿದೆ.

ಇದರ ಮಧ್ಯೆ, ಸಂಸತ್​ ಚಳಿಗಾಲದ ಅಧಿವೇಶನ ಆರಂಭಗೊಳ್ಳುವುದಕ್ಕೂ ಸ್ವಲ್ಪ ದಿನ ಮುಂಚಿತವಾಗಿ ವಿವಾದಿತ ಕೃಷಿ ಕಾನೂನು ವಾಪಸ್​ ಪಡೆದುಕೊಳ್ಳುವುದಾಗಿ ಕೇಂದ್ರ ಘೋಷಣೆ ಮಾಡಿತ್ತು. ಇದಾದ ಬಳಿಕ ಕೂಡ ರೈತ ಸಂಘಟನೆಗಳು, ಕನಿಷ್ಠ ಬೆಂಬಲ ಬೆಲೆ ಘೋಷಣೆ, ರೈತರ ಮೇಲಿನ ಎಫ್​ಐಆರ್​ ಸೇರಿದಂತೆ ಅನೇಕ ವಿಚಾರವಾಗಿ ಕೇಂದ್ರಕ್ಕೆ ಪತ್ರ ಬರೆದಿತ್ತು.

ಈ ಎಲ್ಲ ಬೇಡಿಕೆ ಈಡೇರಿಕೆ ಮಾಡುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿದ್ದು, ಹೀಗಾಗಿ ಅನ್ನದಾತರು ತಮ್ಮ ಹೋರಾಟ ಹಿಂಪಡೆದುಕೊಳ್ಳಲಿದ್ದಾರೆಂದು ತಿಳಿದು ಬಂದಿದೆ.

ಇದೇ ವಿಚಾರವಾಗಿ ಮಾತನಾಡಿರುವ ಭಾರತೀಯ ಕಿಸಾನ್ ಯೂನಿಯನ್​ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್​, ಕಳೆದ ಕೆಲ ತಿಂಗಳ ಹಿಂದೆ ನಡೆದ ಟ್ರ್ಯಾಕ್ಟರ್​ ಮೋರ್ಚಾ ವೇಳೆ ಪೊಲೀಸರು ರೈತರ 160 ಟ್ರ್ಯಾಕ್ಟರ್​ ವಶಕ್ಕೆ ಪಡೆದುಕೊಂಡಿದ್ದು, ಇದರ ಬಗ್ಗೆ ಅಂತಿಮ ನಿರ್ಧಾರ ಹೊರಬರಬೇಕು. ಇದರ ಜೊತೆಗೆ ಲಖೀಂಪುರಿ ಪ್ರಕರಣದ ಅಂತಿಮ ನಿರ್ಧಾರದ ಬಗ್ಗೆ ಕೇಂದ್ರ ತನ್ನ ನಿಲುವು ತಿಳಿಸಬೇಕು ಎಂದಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಅಂತ್ಯಗೊಂಡಿದೆ. ಸಂಯುಕ್ತ ಕಿಸಾನ್ ಮೋರ್ಚದ ಸಮಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಕೃಷಿಗೆ ಸಂಬಂಧಿಸಿದಂತೆ ಬಾಕಿ ಇರುವ ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿದ್ದಾರೆ.

ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ವರ್ತನೆ ಸಕಾರಾತ್ಮಕವಾಗಿದೆ. ರೈತ ಚಳವಳಿ ವಿಷಯವಾಗಿ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಸರ್ಕಾರ ನೀಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ. ಪ್ರತಿಭಟನಾ ನಿರತ ರೈತರ ವಿರುದ್ಧದ ನಕಲಿ ಕೇಸ್‌ಗಳನ್ನು ಹಿಂಪಡೆಯಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಸಂಘಟನೆಗಳು ಸರ್ಕಾರದ ಮುಂದಿಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+