ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿರ
ನವದೆಹಲಿ, ಜೂನ್ 12: ವಯೋಸಹಜ ಆರೋಗ್ಯ ಸಮಸ್ಯೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ನಿನ್ನೆ(ಜೂನ್ 12) ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.
ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆರೋಗ್ಯದ ಕೊಂಚ ಏರುಪೇರು ಕಾಣಿಸಿಕೊಂಡಿತ್ತು. ಅವರು ಮೂತ್ರಪಿಂಡ ಸಮಸ್ಯೆಯಿಂದಲೂ ಬಳಲುತ್ತಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದರು.

ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರ ಮೇಲ್ವಿಚಾರಣೆಯಲ್ಲಿ ವಾಜಪೇಯಿ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ. 2009 ರಲ್ಲಿ ಪಾರ್ಶ್ವವಾಯು ಸಮಸ್ಯೆಗೆ ತುತ್ತಾದ ಮೇಲಿಂದ ಅವರಿಗೆ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ವ್ಹೀಲ್ ಚೇರ್ ನಲ್ಲಿ, ಸಹಾಯಕರ ನೆರವಿನೊಂದಿಗೇ ಇರಬೇಕಾದ ಸಮಸ್ಯೆಯಲ್ಲಿ ಅಜಾತ ಶತ್ರು ವಾಜಪೇಯಿ ಅವರಿದ್ದಾರೆ.












Click it and Unblock the Notifications