ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್ 15ರಂದು ಉಗ್ರರ ದಾಳಿ ಸಾಧ್ಯತೆ; ದೆಹಲಿ ಪೊಲೀಸರಿಗೆ ಎಚ್ಚರಿಕೆ

|
Google Oneindia Kannada News

ನವದೆಹಲಿ, ಆಗಸ್ಟ್ 4: ನವದೆಹಲಿಯಲ್ಲಿ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೇಳೆ ಉಗ್ರರು ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ. ಈ ಕುರಿತು ಗುಪ್ತಚರ ಇಲಾಖೆ ದೆಹಲಿ ಪೊಲೀಸರಿಗೆ ಎಚ್ಚರಿಕೆ ರವಾನೆ ಮಾಡಿದೆ.

ಕೇಂದ್ರ ಗುಪ್ತಚರ ಇಲಾಖೆ ದೆಹಲಿ ಪೊಲೀಸರಿಗೆ ವರದಿ ಸಲ್ಲಿಸಿದ್ದು, ಲಷ್ಕರ್-ಎ-ತೊಯ್ಬಾ ಮತ್ತು ಜೈಷ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಸಂಘಟನೆಗಳು ಸ್ವಾತಂತ್ರ್ಯ ದಿನಾಚರಣೆಯಂದು ದುಷ್ಕೃತ್ಯಗಳನ್ನು ನಡೆಸಲು ಪ್ರಯತ್ನಿಸುತ್ತಿವೆ ಎಂದು ಎಚ್ಚರಿಸಿದೆ.

ನವದೆಹಲಿ: ಜೋರ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನವದೆಹಲಿ: ಜೋರ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

ತನ್ನ 10 ಪುಟಗಳ ವರದಿಯಲ್ಲಿ ಸಂಭವನೀಯ ಬೆದರಿಕೆಯನ್ನು ತಡೆಗಟ್ಟಲು ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಕೆಂಪು ಕೋಟೆಗೆ ಕಟ್ಟುನಿಟ್ಟಾದ ಪ್ರವೇಶ ನಿಯಮಗಳನ್ನು ಜಾರಿಗೊಳಿಸಲು ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ.

 Attack by Lashkar and Jaish militants on August 15 IB warns Delhi Police

ಇಂಡಿಯಾ ಟುಡೇ ವರದಿ ಪ್ರಕಾರ, ಕೆಂಪು ಕೋಟೆಯನ್ನು ಪ್ರವೇಶಿಸುವಾಗ ಅತ್ಯಂತ ಮುನ್ನೆಚ್ಚರಿಕೆ ವಹಿಸುವಂತೆ ದೆಹಲಿ ಪೊಲೀಸರಿಗೆ ಐಬಿ ಸೂಚಿಸಿದೆ. ವರದಿಯಲ್ಲಿ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ಇತ್ತೀಚಿನ ದಾಳಿ ಮತ್ತು ಉದಯಪುರ-ಅಮರಾವತಿಯಂತಹ ಘಟನೆಗಳನ್ನು ಸಹ ಉಲ್ಲೇಖಿಸಲಾಗಿದೆ.

Recommended Video

ಧೋನಿ ಐಡಿಯಾದಿಂದ‌ ಚಿನ್ನದ‌ ಪದಕ:ಸ್ಪೆಷಲ್ ಥ್ಯಾಂಕ್ಸ್ ಹೇಳಿದ ಭಾರತದ ಲಾನ್ ಬೌಲ್ಸ್ ಟೀಂ | OneIndia Kannada

English summary
Intelligence Bureau (IB) alerted Delhi police that Lashkar and Jaish militants are planning to attack Red Fort on August 15 Independence Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X