ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಮೇಲೆ ಮಾರಣಾಂತಿಕ ಹಲ್ಲೆ

ನವದೆಹಲಿ, ಜನವರಿ 5: ದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ (ಜೆಎನ್‌ಯುಎಸ್‌ಯು) ಆಯಿಷಿ ಘೋಷ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಭಾನುವಾರ ಸಂಜೆ ದೆಹಲಿಯಲ್ಲಿ ನಡೆದಿದೆ.

ವಿವಿ ಕ್ಯಾಂಪಸ್‌ನಲ್ಲಿ ಆಯಿಷಿ ಘೋಷ್ ಸ್ನೇಹಿತರ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಎಬಿವಿಪಿ ಕಾರ್ಯಕರ್ತರು ತಲೆ ಹಾಗೂ ಕುತ್ತಿಗೆಗೆ ರಕ್ತ ಬರುವ ಹಾಗೇ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಆಯಿಷಿ ಘೋಷ್ ರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಕಿ ಬ್ಯಾಟ್‌ಗಳಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಜೆಎನ್‌ಯು ಕ್ಯಾಂಪಸ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಭಾರೀ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Attack On JNU Student Union President Aishi Ghosh

ಇತ್ತೀಚೆಗೆ ನಡೆದಿದ್ದ ಜೆಎನ್‌ಯು ವಿವಿ ವಿದ್ಯಾರ್ಥಿ ಸಂಘಟನೆ ಚುನಾವಣೆಯಲ್ಲಿ ಆಯಿಷಿ ಗೋಷ್ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು. ಎಸ್‌ಎಫ್‌ಐ ಸಂಘಟನೆ ಸದಸ್ಯೆಯಾಗಿರುವ ಆಯಿಷಿ ಘೋಷ್ ಜೆಎನ್‌ಯು ನಲ್ಲಿ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದಾರೆ. ವಿವಿಯಿಂದ ಹಾಸ್ಟೆಲ್ ಶುಲ್ಕ ಹೆಚ್ಚಿಸಿದ್ದರಿಂದ ಕಳೆದ ತಿಂಗಳು ವಿವಿ ಕ್ಯಾಂಪಸ್‌ನಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು.

Attack On JNU Student Union President Aishi Ghosh

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಜಲ ಫಿರಂಗಿ, ಲಾಠಿ ಚಾರ್ಜ್ ಮಾಡಿರುವುದು, ನೂರಾರು ಮುಖಂಡರನ್ನು ಬಂಧಿಸಿ, ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುವುದು ಈ ಹಿಂದೆಯೂ ನಡೆದಿತ್ತು. ಈಗಲೂ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+