ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ಆರೋಪಿ ಮೈಕೆಲ್ ಭಾರತಕ್ಕೆ ಹಸ್ತಾಂತರ

|
Google Oneindia Kannada News

ನವದೆಹಲಿ, ಡಿಸೆಂಬರ್ 05: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಲುವಾಗಿ ಹಗರಣದ ಮಧ್ಯವರ್ತಿ ಬ್ರಿಟನ್ ನ ಕ್ರಿಶ್ಚಿಯನ್ ಜೇಮ್ಸ್ ಮೈಕೆಲ್ ನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ.

ಅಗಸ್ಟಾ ವೆಸ್ಟ್ ಲ್ಯಾಂಡ್ ಡೀಲ್, ಮಧ್ಯವರ್ತಿ ತಿಂದ ದುಡ್ಡೆಷ್ಟು?ಅಗಸ್ಟಾ ವೆಸ್ಟ್ ಲ್ಯಾಂಡ್ ಡೀಲ್, ಮಧ್ಯವರ್ತಿ ತಿಂದ ದುಡ್ಡೆಷ್ಟು?

ಮಂಗಳವಾರ ತಡರಾತ್ರಿ ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಜೇಮ್ಸ್ ಭಾರತಕ್ಕೆ ಬಂದಿಳಿದಿದ್ದಾರೆ. 'ಯುನಿಕಾರ್ನ್' ಎಂಬ ಕಾರ್ಯಾಚರಣೆಯ ಹೆಸರಿನಲ್ಲಿ ಅವರನ್ನು ಭಾರತಕ್ಕೆ ಕರೆತರಲಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದಾವೋಳ್, ಮತ್ತು ಸಿಬಿಐ ನ ಹಂಗಾಮಿ ನಿರ್ದೇಶಕ ಎಂ ನಾಗೇಶ್ವರ್ ರಾವ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಅಗಸ್ಟಾ ವೆಸ್ಟ್ ಲ್ಯಾಂಡ್: ಮಾಜಿ ವಾಯುಸೇನಾ ಮುಖ್ಯಸ್ಥ ತ್ಯಾಗಿ ಬಂಧನ ಅಗಸ್ಟಾ ವೆಸ್ಟ್ ಲ್ಯಾಂಡ್: ಮಾಜಿ ವಾಯುಸೇನಾ ಮುಖ್ಯಸ್ಥ ತ್ಯಾಗಿ ಬಂಧನ

ಖಾಸಗಿ ಜೆಟ್ ಮೂಲಕ ಜೇಮ್ಸ್ ನನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿತ್ತು. 57 ವರ್ಷದ ಜೇಮ್ಸ್ ನನ್ನು ಇಂದು ಕೋರ್ಟಿನೆದುರು ಹಾಜರು ಪಡಿಸುವ ಸಾಧ್ಯತೆ ಇದೆ.

AugustaWestland Chopper deal: middleman Christian Michel brought to India

2012 ರಲ್ಲಿ ಇಟಲಿ ಮೂಲದ ಅಗಸ್ಟಾವೆಸ್ಟ್ ಲ್ಯಾಂಡ್ ಕಂಪನಿಯ ಜೊತೆ ಭಾರತ 3600 ಕೋಟಿ ರೂ.ಒಪ್ಪಂದ ಮಾಡಿಕೊಂಡಿತ್ತು. ವಿವಿಐಪಿಗಳ ಪ್ರಯಾಣಕ್ಕಾಗಿ ವಾಯುಪಡೆಗೆ 12 ಹೆಲಿಕಾಪ್ಟರ್ ಖರೀದಿಗೆ ಸರ್ಕಾರ ಟೆಂಡರ್ ಕರೆಯಲಾಗಿತ್ತು. ಅಮೆರಿಕ, ಇಟಲಿ ಸೇರಿದಂತೆ ಪ್ರತಿಷ್ಠಿತ ರಾಷ್ಟ್ರಗಳ ಕಂಪನಿಗಳು ಟೆಂಡರ್ನಲ್ಲಿ ಪಾಲ್ಗೊಂಡಿದ್ದವು. ಆದರೆ. ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿ ಕೆಲ ರಾಜಕಾರಣಿಗಳಿಗೆ 360 ಕೋಟಿ ರೂಪಾಯಿ ಲಂಚ ನೀಡಿ ಟೆಂಡರ್ ಪಡೆದಿತ್ತು.

ಅಗಸ್ಟಾ ವೆಸ್ಟ್ ಲ್ಯಾಂಡ್ ಡೀಲ್: ದುಬೈ ಸಂಸ್ಥೆಯ ನಿರ್ದೇಶಕಿ ಬಂಧನಅಗಸ್ಟಾ ವೆಸ್ಟ್ ಲ್ಯಾಂಡ್ ಡೀಲ್: ದುಬೈ ಸಂಸ್ಥೆಯ ನಿರ್ದೇಶಕಿ ಬಂಧನ

ಈ ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಕ್ರಿಶ್ಚಿಯನ್ ಜೇಮ್ಸ್ ಮೈಕೆಲ್ ಲಂಚ ಪಡೆದಿದ್ದಲ್ಲದೆ, ಭಾರತಕ್ಕೆ ಕಿಕ್ ಬ್ಯಾಕ್ ನೀಡಿದ ಆರೋಪ ಎದುರಿಸುತ್ತಿದ್ದು, ಇದೀಗ ತನಿಖೆಗಾಗಿ ಆತನನ್ನು ಭಾರತಕ್ಕೆ ಕರೆತರಲಾಗಿದೆ.

English summary
The alleged middleman in the Rs 3,600-crore AgustaWestland chopper deal, Christian Michel, was brought to India late Tuesday night following his extradition by the UAE.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X