Ayodhya Case Final Hearing Live Updates: ಅಯೋಧ್ಯೆ ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
Recommended Video
ನವದೆಹಲಿ, ಅಕ್ಟೋಬರ್ 16: ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 40 ದಿನಗಳ ನಡೆದ ಪ್ರತಿದಿನ ವಿಚಾರಣೆ ಅಕ್ಟೋಬರ್ 16ಕ್ಕೆ ಅಂತ್ಯಗೊಳ್ಳುತ್ತಿದೆ.
ಜಸ್ಟೀಸ್ ಬೊಬ್ಡೆ ಅವರಲ್ಲದೆ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು, ಅಕ್ಟೋಬರ್ 17ರೊಳಗೆ ಈ ಕೇಸಿಗೆ ಸಂಬಂಧಿಸಿದ ಎಲ್ಲಾ ವಿಚಾರಣೆಯನ್ನು ಅಂತಿಮಗೊಳಿಸಲಿದೆ. ನವೆಂಬರ್ 4-5ರಂದು ಅಂತಿಮ ತೀರ್ಪು ಹೊರ ಬೀಳುವ ಸಾಧ್ಯತೆಯಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನವೆಂಬರ್ 17ರಂದು ನಿವೃತ್ತಿ ಹೊಂದುತ್ತಿರುವುದರಿಂದ ಈ ಪ್ರಕರಣದ ತೀರ್ಪಿನ ಬಗ್ಗೆ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.
ಏನಿದು ಪ್ರಕರಣ?: 1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು.

2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ಅಂತಿಮ ಹಂತ ತಲುಪಿದ್ದು, ತೀರ್ಪು ಹೊರಬೀಳಬೇಕಿದೆ. ಇಂದು ಕೊನೆಯದಿನದ ವಿಚಾರಣೆ ನಡೆಯುತ್ತಿದ್ದು, ಅದರ ಲಭ್ಯಮಾಹಿತಿಯ ಅಪ್ಡೇಟ್ಸ್ ಅನ್ನು 'ಒನ್ ಇಂಡಿಯಾ ಕನ್ನಡ' ನೀಡಲಿದೆ.











Click it and Unblock the Notifications