ಅಯೋಧ್ಯೆ ಪ್ರಕರಣ: ಆ 6 ರಿಂದ ಸುಪ್ರೀಂ ಕೋರ್ಟ್ ನಲ್ಲಿ ಪ್ರತಿದಿನ ವಿಚಾರಣೆ

ನವದೆಹಲಿ, ಆಗಸ್ಟ್ 02: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಆಗಸ್ಟ್ 6 ರಿಂದ ಪ್ರತಿದಿನ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನದ ಮೂಲಕ ಸಮಸ್ಯೆ ಬಗೆ ಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಈ ಮೊದಲು ತಿಳಿಸಿತ್ತು.

ಆ ಹಿನ್ನೆಲೆಯಲ್ಲಿ ಮೂವರು ಸಂಧಾನಕಾರರನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು. ಈ ತ್ರಿಸದಸ್ಯ ಸಮಿತಿಯಲ್ಲಿ ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ಶ್ರೀ ರವಿಶಂಕರ್ ಗುರೂಜಿ ಮತ್ತು ಶ್ರೀರಾಮ್ ಕಂಚು ಇದ್ದರು.

Ayodhya Case: Supreme Court Says Daily Hearing From August 6

ಈ ಮೂವರ ಸಮಿತಿ ಜುಲೈ 18 ರಂದೇ ಮೊದಲ ಹಂತದ ವರದಿಯನ್ನು ನೀಡಿತ್ತು. ಆದರೆ ಸಂಧಾನ ನಿರೀಕ್ಷಿಸಿದ ಮಟ್ಟಿಗೆ ನಡದೆದಿಲ್ಲ ಎಂದು ಆಗಲೇ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ನಂತರ ಆಸಗ್ಟ್ 1 ರಂದು ತನ್ನ ಅಂತಿಮ ವರದಿಯನ್ನು ಈ ಸಮಿತಿ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಮುಂದಿರಿಸಿತ್ತು. ಆದರೆ ಸಂಧಾನ ವೈಫಲ್ಯವಾದ ಹಿನ್ನೆಲೆಯಲ್ಲಿ ಇದೀಗ ಕಾಣೂನುನ ಮೂಲಕವೇ ಈ ವಿವಾದವನ್ನು ಬಗೆಹರಿಸುವುದು ಅನಿವಾರ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+