ಅಯೋಧ್ಯೆ ವಿವಾದ: ಸುಪ್ರೀಂ ಮೊರೆಹೋದ ಕೇಂದ್ರ ಸರ್ಕಾರ

ನವದೆಹಲಿ, ಜನವರಿ 29: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ವಿವಾದಮುಕ್ತವಾದ ಭೂಮಿಯನ್ನು ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಹಿಂದಿರುಗಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆಹೋಗಿದೆ.

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಮಮಂದಿರ ನಿರ್ಮಾಣದ ಭರವಸೆ ನೀಡಿದ್ದ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ, ಇದೀಗ ಮತ್ತೆ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಅಯೋಧ್ಯೆ ವಿವಾದದ ವಿಷಯಕ್ಕೆ ಸಂಬಂಧಿಸಿದಂತೆ ರಾಮಭಕ್ತರಿಗೆ ಕೊಂಚವಾರದೂ ನಿರಾಳತೆ ನೀಡಲು ಮುಂದಾಗಿದೆ. ಅದರ ಫಲವೇ ಈ ಮನವಿ.

Ayodhya dispute: centre moves SC to transfer non disputed land in Ayodhya to trust

ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಕೇಳಿ ಬಂದಿದೆ. ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನನ್ನು ಜಾರಿಗೆ ಒತ್ತಾಯಿಸಿವೆ. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+