ಅಯೋಧ್ಯೆ ವಿವಾದ: ಸಂಧಾನದ ಕುರಿತು ಸುಪ್ರೀಂ ತೀರ್ಪು ಪ್ರಕಟ

ನವದೆಹಲಿ, ಮಾರ್ಚ್ 08: ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತಂತೆ ತನ್ನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು(ಮಾ.08) ಪ್ರಕಟಿಸಿದೆ

ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ಕುರಿತು ಮಾ.6 ರಂದು ವಿಚಾರಣೆ ನಡೆಸಿ, ತೀರ್ಪನ್ನು ಕಾಯ್ದಿರಿಸಿತ್ತು. ಪೀಠದಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್ ಎ ಬೊಬ್ದೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜೀರ್ ಇದ್ದಾರೆ.

Ayodhya dispute: SC pronounces verdict on court-monitored mediation , LIVE updates

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಂಧಾನದ ಮೂಲಕ ವಿವಾದ ಬಗೆಹರಿಸಿಕೊಳ್ಳುವ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ತನ್ನ ತೀರ್ಪಿನಲ್ಲಿ ಸಂಧಾನಕ್ಕೆ ಒಪ್ಪಿಗೆ ಸೂಚಿಸಿದೆ.

ಸಂಧಾನ ಪ್ರಕ್ರಿಯೆ, ತೀರ್ಪು ಬಂದ ನಾಲ್ಕು ವಾರದೊಳಗೆ ಆರಂಭವಾಗಿ, ಎಂಟು ವಾರದೊಳಗೆ ಮುಕ್ತಾಯವಾಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮುಸ್ಲಿಂ ಅರ್ಜಿದಾರರು ಸಂಧಾನಕ್ಕೆ ಒಪ್ಪಿದ್ದಾರೆ ಎಂದು ಮುಸ್ಲಿಂ ಪರ ವಕೀಲ ನ್ಯಾ. ರಾಜೀವ್ ಧವನ್ ಹೇಳಿದ್ದರು.. ಮಧ್ಯಸ್ಥಿಕೆ ವಹಿಸಲು ಯಾರಿಗೆ ಹೇಳಬೇಕು ಅಥವಾ ಯಾವ ಸಮಿತಿಗೆ ಹೇಳಬೇಕು ಎಂಬ ಬಗ್ಗೆ ಅರ್ಜಿದಾರರೇ ಒಮ್ಮತದ ನಿರ್ಧಾರಕ್ಕೆ ಬರಬೇಕು ಎಂದು ಮುಖ್ಯನ್ಯಾಯ ಮೂರ್ತಿ ರಂಜನ್ ಗೊಗೊಯ್ ಹೇಳಿದ್ದರು.

Mar 08, 2019, 11:20 am IST

ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ಶ್ರೀ ರವಿಶಂಕರ್ ಗುರೂಜಿ, ಶ್ರೀರಾಮ್ ಪಂಚು ಅವರನ್ನೊಳಗೊಂಡ ತ್ರಿಸದ್ಯ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿದೆ.
Mar 08, 2019, 11:14 am IST

ಫೈಜಾಬಾದಿನಲ್ಲಿ ಸಂಧಾನಕಾರರಿಗೆ ಎಲ್ಲ ರೀತಿಯ ವ್ಯವಸ್ಥೆಯನ್ನೂ ಉತ್ತರ ಪ್ರದೇಶ ಸರ್ಕಾರ ಮಾಡಬೇಕು: ಸುಪ್ರೀಂ ಕೋರ್ಟ್
Mar 08, 2019, 11:10 am IST

ನ್ಯಾಯಾಲಯ ನೇಮಿಸಿರುವ ಸಂಧಾನ ಸಮಿತಿಯ ನೇತೃತ್ವವನ್ನು ನ್ಯಾ ಖಾಲಿಫುಲ್ಲಾ(ನಿವೃತ್ತ) ವಹಿಸಲಿದ್ದಾರೆ.
Mar 08, 2019, 11:07 am IST

ಸಂಧಾನ ಪ್ರಕ್ರಿಯೆ ಕ್ಯಾಮರಾ ಮೂಲಕ ನಡದೆಯಬೇಕು. ಪೈಜಾಬಾದಿನಲ್ಲಿ ಸಂಧಾನ ಪ್ರಕ್ರಿಯೆ ನಡೆಯಬೇಕು. ಈ ಪ್ರಕ್ರಿಯೆ ನ್ಯಾ.ಕಾಲಿಫುಲ್ಲಾ, ಶ್ರೀ ಶ್ರೀ ರವಿಶಂಕರ್ ಮತ್ತು ಹಿರಿಯ ವಕೀಲ ಶ್ರೀರಾಮ್ ಪಂಚು ಅವರ ನೇತೃತ್ವದಲ್ಲಿ ನಡೆಯಬೇಕು: ಸುಪ್ರೀಂ ಕೋರ್ಟ್
Mar 08, 2019, 11:05 am IST

ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುವ ಸಂಧಾನ ಪ್ರಕ್ರಿಯೆ ಗೌಪ್ಯವಾಗಿರಲಿ- ರಂಝನ್ ಗೊಗೊಯ್, ಸಿಜೆಐ
Mar 08, 2019, 11:04 am IST

ಸಂಧಾನ ಪ್ರಕ್ರಿಯೆಯನ್ನು 4 ವಾರದೊಳಗೆ ಆರಂಭಿಸಿ, 8 ತಿಂಗಳೊಳಗೆ ಮುಗಿಸಿ: ಸುಪ್ರೀಂ
Mar 08, 2019, 11:04 am IST

ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್
Mar 08, 2019, 11:04 am IST

ಫೆಬ್ರವರಿ 26 ರಿಂದ ಅಯೋಧ್ಯೆ ರಾಮ ಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿದೆ.
Mar 08, 2019, 11:04 am IST

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+