• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಯೋಧ್ಯೆ ವಿವಾದ: ಸಂಧಾನದ ಕುರಿತ ತೀರ್ಪು ಕಾಯ್ದಿರಿಸಿದ ಸುಪ್ರೀಂ

|

ನವದೆಹಲಿ, ಮಾರ್ಚ್ 06: ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತಂತೆ ತನ್ನ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಮುಸ್ಲಿಂ ಅರ್ಜಿದಾರರು ಸಂಧಾನಕ್ಕೆ ಒಪ್ಪಿದ್ದಾರೆ ಎಂದು ಮುಸ್ಲಿಂ ಪರ ವಕೀಲ ನ್ಯಾ. ರಾಜೀವ್ ಧವನ್ ಹೇಳಿದ್ದಾರೆ.

ಅಯೋಧ್ಯೆ ವಿವಾದ: ಮಧ್ಯಸ್ಥಿಕೆಯಿಂದ ಬಗೆಹರಿಸುವ ಬಗ್ಗೆ ಇಂದು ತೀರ್ಮಾನ

ಮಧ್ಯಸ್ಥಿಕೆ ವಹಿಸಲು ಯಾರಿಗೆ ಹೇಳಬೇಕು ಅಥವಾ ಯಾವ ಸಮಿತಿಗೆ ಹೇಳಬೇಕು ಎಂಬ ಬಗ್ಗೆ ಅರ್ಜಿದಾರರೇ ಒಮ್ಮತದ ನಿರ್ಧಾರಕ್ಕೆ ಬರಬೇಕು ಎಂದು ಮುಖ್ಯನ್ಯಾಯ ಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಸದ್ಯದಲ್ಲೇ ಈ ಕುರಿತು ತೀರ್ಪು ನೀಡಲಿದ್ದು, ಸದ್ಯಕ್ಕೆ ತೀರ್ಪನ್ನು ಕಾಯ್ದಿರಿಸಲಾಗಿದೆ.

25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್

ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ಕುರಿತು ಇಂದು ತೀರ್ಪು ನೀಡಬೇಕಿತ್ತು. ಪೀಠದಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್ ಎ ಬೊಬ್ದೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜೀರ್ ಇದ್ದಾರೆ.

ಫೆಬ್ರವರಿ 26 ರಿಂದ ಅಯೋಧ್ಯೆ ರಾಮ ಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿದೆ.

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Supreme Court reserves order on the issue of referring Ram Janmabhoomi-Babri Masjid title dispute case to court appointed and monitored mediation for “permanent solution”.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X

Loksabha Results

PartyLWT
BJP+000
CONG+000
OTH000

Arunachal Pradesh

PartyLWT
CONG000
BJP000
OTH000

Sikkim

PartyLWT
SDF000
SKM000
OTH000

Odisha

PartyLWT
BJD000
CONG000
OTH000

Andhra Pradesh

PartyLWT
TDP000
YSRCP000
OTH000

AWAITING

SPY Reddy - JSP
Nandyal
AWAITING
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more