ಅಯೋಧ್ಯೆ ವಿವಾದ: ಫೈಜಾಬಾದ್ ಮೇಲೆ ಎಲ್ಲರ ಕಣ್ಣು

ನವದೆಹಲಿ, ಮಾರ್ಚ್ 08: ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂ ವಿವಾದದ ಸಂಧಾನ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಎಂತು ವಾರಗಳೊಳಗೆ ಸಂಧಾನ ನಡೆಸುವಂತೆ ಸೂಚಿಸಿದೆ.

ಈ ಸಂಧಾನ ಪ್ರಕ್ರಿಯೆಯನ್ನು ಉತ್ತರ ಪ್ರದೇಶದ ಫೈಜಾಬಾದಿನಲ್ಲಿಯೇ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದರಿಂದ ಈಗ ದೇಶದ ಎಲ್ಲರ ಕಣ್ಣೂ, ಫ್ಐಜಾಬಾದಿನ ಮೇಲೆ ನೆಟ್ಟಿದೆ.

ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ಶ್ರೀ ರವಿಶಂಕರ್ ಗುರೂಜಿ, ಶ್ರೀರಾಮ್ ಪಂಚು ಅವರನ್ನೊಳಗೊಂಡ ತ್ರಿಸದ್ಯ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದು, ತೀರ್ಪು ಬಂಧ ನಾಲ್ಕು ವಾರದೊಳಗೆ ಸಂಧಾನ ಪ್ರಕ್ರಿಯೆ ಆರಂಭಿಸುವಂತೆ ಸಮಿತಿಗೆ ಸೂಚನೆ ನೀಡಿದೆ. ಎಂಟು ವಾರಗಳೊಳಗೆ ಸಂಧಾನ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕಿದೆ.

Ayodhya dispute: SC tells Mediation should be taken place in Faizabad.

ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ಕುರಿತು ಮಾ.6 ರಂದು ವಿಚಾರಣೆ ನಡೆಸಿ, ತೀರ್ಪನ್ನು ಕಾಯ್ದಿರಿಸಿತ್ತು. ಪೀಠದಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್ ಎ ಬೊಬ್ದೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜೀರ್ ಇದ್ದರು.

ಫೆಬ್ರವರಿ 26 ರಿಂದ ಅಯೋಧ್ಯೆ ರಾಮ ಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿದೆ.

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+