ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ವಿವಾದ: ಫೈಜಾಬಾದ್ ಮೇಲೆ ಎಲ್ಲರ ಕಣ್ಣು

|
Google Oneindia Kannada News

ನವದೆಹಲಿ, ಮಾರ್ಚ್ 08: ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂ ವಿವಾದದ ಸಂಧಾನ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಎಂತು ವಾರಗಳೊಳಗೆ ಸಂಧಾನ ನಡೆಸುವಂತೆ ಸೂಚಿಸಿದೆ.

ಈ ಸಂಧಾನ ಪ್ರಕ್ರಿಯೆಯನ್ನು ಉತ್ತರ ಪ್ರದೇಶದ ಫೈಜಾಬಾದಿನಲ್ಲಿಯೇ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದರಿಂದ ಈಗ ದೇಶದ ಎಲ್ಲರ ಕಣ್ಣೂ, ಫ್ಐಜಾಬಾದಿನ ಮೇಲೆ ನೆಟ್ಟಿದೆ.

ಅಯೋಧ್ಯೆ ವಿವಾದ LIVE: ಸಂಧಾನದ ಕುರಿತು ಸುಪ್ರೀಂ ತೀರ್ಪು ಪ್ರಕಟ ಅಯೋಧ್ಯೆ ವಿವಾದ LIVE: ಸಂಧಾನದ ಕುರಿತು ಸುಪ್ರೀಂ ತೀರ್ಪು ಪ್ರಕಟ

ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ಶ್ರೀ ರವಿಶಂಕರ್ ಗುರೂಜಿ, ಶ್ರೀರಾಮ್ ಪಂಚು ಅವರನ್ನೊಳಗೊಂಡ ತ್ರಿಸದ್ಯ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದು, ತೀರ್ಪು ಬಂಧ ನಾಲ್ಕು ವಾರದೊಳಗೆ ಸಂಧಾನ ಪ್ರಕ್ರಿಯೆ ಆರಂಭಿಸುವಂತೆ ಸಮಿತಿಗೆ ಸೂಚನೆ ನೀಡಿದೆ. ಎಂಟು ವಾರಗಳೊಳಗೆ ಸಂಧಾನ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕಿದೆ.

Ayodhya dispute: SC tells Mediation should be taken place in Faizabad.

ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ಕುರಿತು ಮಾ.6 ರಂದು ವಿಚಾರಣೆ ನಡೆಸಿ, ತೀರ್ಪನ್ನು ಕಾಯ್ದಿರಿಸಿತ್ತು. ಪೀಠದಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್ ಎ ಬೊಬ್ದೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜೀರ್ ಇದ್ದರು.

ಫೆಬ್ರವರಿ 26 ರಿಂದ ಅಯೋಧ್ಯೆ ರಾಮ ಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿದೆ.

ಆಯೋಧ್ಯೆ ವಿವಾದ ಸಂಧಾನ: ಸುಪ್ರೀಂ ನೇಮಿಸಿರುವ ಮೂವರು ಸದಸ್ಯರು ಯಾರು? ಆಯೋಧ್ಯೆ ವಿವಾದ ಸಂಧಾನ: ಸುಪ್ರೀಂ ನೇಮಿಸಿರುವ ಮೂವರು ಸದಸ್ಯರು ಯಾರು?

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.

English summary
Supreme Court pronounces it's verdict on the issue of referring Ram Janmabhoomi-Babri Masjid title dispute case to court-appointed and monitored mediation for “permanent solution”. SC tells Mediation should be taken place in Faizabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X