• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಯೋಧ್ಯೆ ವಿವಾದ: ಮಧ್ಯಸ್ಥಿಕೆಯಿಂದ ಬಗೆಹರಿಸುವ ಬಗ್ಗೆ ಇಂದು ತೀರ್ಮಾನ

|

ನವದೆಹಲಿ, ಮಾರ್ಚ್ 06: ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ಮಧ್ಯಸ್ಥಿಕೆಯ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತಂತೆ ಸುಪ್ರೀಂ ಕೋರ್ಟ್ ಇಂದು ತೀರ್ಮಾನಿಸಲಿದೆ.

ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ಕುರಿತು ಇಂದು ತೀರ್ಮಾನಿಸಲಿದ್ದು, ಪೀಠದಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್ ಎ ಬೊಬ್ದೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜೀರ್ ಇದ್ದಾರೆ.

ಮಾರ್ಚ್ 05ಕ್ಕೆ ಸುಪ್ರೀಂಕೋರ್ಟಿನಲ್ಲಿ ಅಯೋಧ್ಯಾ ಭೂ ವಿವಾದ ವಿಚಾರಣೆ

ಫೆಬ್ರವರಿ 26 ರಿಂದ ಅಯೋಧ್ಯೆ ರಾಮ ಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿದೆ.

25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.

English summary
5-judge constitutional bench of Supreme Court will today decide whether to order court-monitored mediation in Ayodhya dispute case
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X