ಅಯೋಧ್ಯೆ ವಿವಾದ: ಸಂಧಾನದ ಕುರಿತು ಸುಪ್ರೀಂನಲ್ಲಿಂದು ತೀರ್ಪು
ನವದೆಹಲಿ, ಮಾರ್ಚ್ 08: ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತಂತೆ ತನ್ನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು(ಮಾ.08) ಪ್ರಕಟಿಸಲಿದೆ.
ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ಕುರಿತು ಮಾ.6 ರಂದು ವಿಚಾರಣೆ ನಡೆಸಿ, ತೀರ್ಪನ್ನು ಕಾಯ್ದಿರಿಸಿತ್ತು. ಪೀಠದಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್ ಎ ಬೊಬ್ದೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಅಬ್ದುಲ್ ನಾಜೀರ್ ಇದ್ದಾರೆ.

ಮುಸ್ಲಿಂ ಅರ್ಜಿದಾರರು ಸಂಧಾನಕ್ಕೆ ಒಪ್ಪಿದ್ದಾರೆ ಎಂದು ಮುಸ್ಲಿಂ ಪರ ವಕೀಲ ನ್ಯಾ. ರಾಜೀವ್ ಧವನ್ ಹೇಳಿದ್ದರು.. ಮಧ್ಯಸ್ಥಿಕೆ ವಹಿಸಲು ಯಾರಿಗೆ ಹೇಳಬೇಕು ಅಥವಾ ಯಾವ ಸಮಿತಿಗೆ ಹೇಳಬೇಕು ಎಂಬ ಬಗ್ಗೆ ಅರ್ಜಿದಾರರೇ ಒಮ್ಮತದ ನಿರ್ಧಾರಕ್ಕೆ ಬರಬೇಕು ಎಂದು ಮುಖ್ಯನ್ಯಾಯ ಮೂರ್ತಿ ರಂಜನ್ ಗೊಗೊಯ್ ಹೇಳಿದ್ದರು.
ಫೆಬ್ರವರಿ 26 ರಿಂದ ಅಯೋಧ್ಯೆ ರಾಮ ಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿದೆ.
1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.












Click it and Unblock the Notifications