ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ತೀರ್ಪು: ರಾಜ್ಯಗಳಿಗೆ ಬಿಗಿಭದ್ರತೆಗೆ ಕೇಂದ್ರದ ಸೂಚನೆ

|
Google Oneindia Kannada News

ನವದೆಹಲಿ, ನವೆಂಬರ್ 07: ಸುಪ್ರೀಂ ಕೋರ್ಟ್ ನಿಂದ ಸದ್ಯದಲ್ಲೇ ಹೊರಬೀಳಲಿರುವ ಅಯೋಧ್ಯೆ ವಿವಾದ ತೀರ್ಪಿಗೆ ಸಂಬಂಧಿಸಿದಂತೆ ಹಲವು ರಾಜ್ಯಗಳ ಸೂಕ್ಷ್ಮ ಸ್ಥಳಗಳಲ್ಲಿ ಭದ್ರತೆ ಕಲ್ಪಿಸಲು ಕೇಮದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಹೊರಡಿಸಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಅತ್ಯ ಭದ್ರತೆಯನ್ನು ಕಲ್ಪಿಸಲು ಮತ್ತು ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡದೆ.

25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್

ಈಗಾಗಲೇ ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲೂ ಆ ಕುರಿತು ಯಾವುದೇ ಸಂದೇಶ ರೀತಿಯ ಪ್ರಚೋದನಾತ್ಮಕ ಸಂದೇಶ ಕಳಿಸುವುದನ್ನೂ ಈಗಾಗಲೇ ನಿರ್ಬಂಧಿಸಲಾಗಿದೆ.

Ayodhya Verdict: Centre Issues Security Alert For Sensitive Places in States

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನವೆಂಬರ್ 17 ರಂದು ನಿವೃತ್ತರಾಗುತ್ತಿರುವ ಕಾರಣ ಅದಕ್ಕೂ ಮುನ್ನ ತೀರ್ಪು ಅಯೋಧ್ಯೆ ವಿವಾದದ ತೀರ್ಪು ಹೊರಬರಬೇಕಿದೆ.

ಅಯೋಧ್ಯೆ ತೀರ್ಪು ಕೇಳುವ ಮುನ್ನವೇ ಅಸುನೀಗಿದ ರಾಮಮಂದಿರ ಶಿಲ್ಪಿಅಯೋಧ್ಯೆ ತೀರ್ಪು ಕೇಳುವ ಮುನ್ನವೇ ಅಸುನೀಗಿದ ರಾಮಮಂದಿರ ಶಿಲ್ಪಿ

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ಅಂತಿಮ ಹಂತ ತಲುಪಿದ್ದು, ತೀರ್ಪು ಹೊರಬೀಳಬೇಕಿದೆ.

English summary
Ayodhya Verdict: Centre Issues Security Alert For Sensitive Places in States, Ayodhya Verdict
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X