ಪಾನ್ ಮಸಾಲ ಬಳಕೆ ನಿಷೇಧ ಹೇರಿದ ದೆಹಲಿ ಸರ್ಕಾರ
ನವದೆಹಲಿ, ಜುಲೈ 17: ಕೊರೊನಾವೈರಸ್ ಸೋಂಕು ಹರಡದಂತೆ ಪಾನ್ ಮಸಾಲ, ಗುಟ್ಕಾ ಸೇವನೆಗೆ ತಾತ್ಕಾಲಿಕ ನಿಷೇಧ ಹೇರಿದ್ದ ದೆಹಲಿ ಸರ್ಕಾರವು ಈ ನಿಷೇಧವನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿದೆ. ಹರ್ಯಾಣ ಸರ್ಕಾರ, ಉತ್ತರಪ್ರದೇಶ ಸರ್ಕಾರ ಕೂಡಾ ಒಂದು ವರ್ಷಗಳ ಕಾಲ ಪಾನ್ ಮಸಾಲ, ಗುಟ್ಕಾ ಸೇವನೆಗೆ ನಿಷೇಧ ಹೇರಿದೆ.
ಸರ್ಕಾರದ ಆದೇಶದಂತೆ ಉತ್ಪಾದನೆ ಹಾಗೂ ಮಾರಾಟ ಮಾತ್ರವಲ್ಲದೆ, ಶೇಖರಿಸಿಟ್ಟುಕೊಳ್ಳಲು ಕೂಡಾ ಸದ್ಯಕ್ಕೆ ಅನುಮತಿ ಇಲ್ಲ ಎಂದು ಆಹಾರ ಮತ್ತು ಔಷಧಿ ಪ್ರಾಧಿಕಾರದ ಡಿಎನ್ ಸಿಂಗ್ ಹೇಳಿದ್ದಾರೆ.
2006ರ ಆಹಾರ ಮತ್ತು ಸುರಕ್ಷತಾ ಗುಣಮಟ್ಟ ಕಾಯ್ದೆ ಸೆಕ್ಷನ್ 30ರ ಅನ್ವಯ ಪಾನ್ ಮಸಾಲ ಬಳಕೆ ನಿಷೇಧ ಹಾಕಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೊರೊನಾ ವೈರಸ್‌ಗೆ ಚಿಕಿತ್ಸೆ ಇನ್ನೂ ಕಂಡುಹಿಡಿಯಲಾಗಿಲ್ಲ. ಆದರೆ ರೋಗ ಹರಡದಂತೆ ಕೊಂಚ ಮಟ್ಟಿಗೆ ತಡೆಗಟ್ಟಬಹುದಾಗಿದೆ. ಕೈಕಾಲುಗಳನ್ನು ಸೋಪು, ನೀರಿನಿಂದ ಕೈತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈನಿಂದ ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು. ಈಗಾಗಲೇ ಸೋಂಕಿನ ಲಕ್ಷಣಗಳು ಕಂಡು ಬಂದಿರುವವರಿಂದ ದೂರವಿರಬೇಕು. ಒಂದೊಮ್ಮೆ ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ.
ದೆಹಲಿಯಲ್ಲಿ ಗುರುವಾರದಂದು 1652 ಕೊರೊನಾವೈರಸ್ ದಾಖಲಾಗಿದೆ. ಗುಣಮುಖರಾಗುವವರ ಪ್ರಮಾಣ ಶೇ 82ಕ್ಕೇರಿದೆ. 41 ಮಂದಿ ಮೃತಪಟ್ಟಿದ್ದು, ಒಟ್ಟಾರೆ, 1,16,993 ಪ್ರಕರಣಗಳು ದಾಖಲಾಗಿದ್ದು, 3487 ಮಂದಿ ಮೃತಪಟ್ಟಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications