ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಬೇರೂರಿರುವ ಬಾಂಗ್ಲಾ ಉಗ್ರರು

|
Google Oneindia Kannada News

ನವದೆಹಲಿ, ಅಕ್ಟೋಬರ್ 14: ಬಂಗ್ಲಾದೇಶದ ಜಮಾತ್ ಉಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಭಾರತದಲ್ಲಿ ಬೇರೂರುತ್ತಿದೆ ಎಂದು ತನಿಖಾ ಸಂಸ್ಥೆ ಎನ್‌ಐಎ (ನ್ಯಾಷನಲ್ ಇನ್ವೆಸ್ಟಿಗೇಶನ್ ಏಜೆನ್ಸಿ) ಹೇಳಿದೆ.

Recommended Video

ಬಾಲಕೋಟ್‌ನಲ್ಲಿ ಮತ್ತೆ ಭಯೋತ್ಪಾದಕರು ಸಕ್ರಿಯ | Oneindia Kannada

ಬಾಂಗ್ಲಾದೇಶದಿಂದ ನಿರಾಶ್ರಿತರ ಸೋಗಿನಲ್ಲಿ ಬಂದು ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಈ ಉಗ್ರರು ನೆಲೆ ಕಂಡುಕೊಂಡಿದ್ದಾರೆ ಎಂದು ಎನ್‌ಐಎ ಡಿಜಿ ಯೋಗೇಶ್ ಚಂದೇರ್ ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಮತ್ತೊಂದು ಹೊಡೆತ: ಕಪ್ಪುಪಟ್ಟಿಗೆ ಸೇರುವ ಸಾಧ್ಯತೆಪಾಕಿಸ್ತಾನಕ್ಕೆ ಮತ್ತೊಂದು ಹೊಡೆತ: ಕಪ್ಪುಪಟ್ಟಿಗೆ ಸೇರುವ ಸಾಧ್ಯತೆ

ಭಯೋತ್ಪಾದಕ ನಿಗ್ರಹ ದಳದ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶಿ ವಲಸಿಗರ ಸೋಗಿನಲ್ಲಿ ಭಾರತದಲ್ಲಿ ಅಲ್ಲಲ್ಲಿ ನೆಲೆಸಿರುವ ಜಮಾತ್ ಉಲ್ ಮುಜಾಹಿದ್ದೀನ್ ಸದಸ್ಯರು ತಮ್ಮ ಕಾರ್ಯಚಟುವಟಿಕೆ ಆರಂಭಿಸಿದ್ದಾರೆ ಎಂದರು.

Bangladesh Terrorists Are In India: NIA

ಜಮಾತ್ ಉಲ್ ಮುಜಾಹಿದ್ದೀನ್ ಸಂಘಟನೆಯ 25 ಉಗ್ರರ ಮಾಹಿತಿ ಕಲೆ ಹಾಕಲಾಗಿದ್ದು, ರಾಜ್ಯಗಳಿಗೆ ಕೆಲವೇ ದಿನಗಳಲ್ಲಿ ಹಂಚಿಕೆ ಮಾಡಲಾಗುತ್ತದೆ ಎಂದು ಎನ್‌ಐಎ ಮುಖ್ಯಸ್ಥರು ಹೇಳಿದರು. ಸಿಐಎ ಮತ್ತು ಎನ್‌ಐಎ ಗಳು ಜಂಟಿಯಾಗಿ ಈ ಉಗ್ರ ಸಂಘಟನೆಯ ವಿರುದ್ಧ ಕಾರ್ಯಾಚರನೆ ನಡೆಸಿದೆ ಎಂದು ಮಾಹಿತಿ ನೀಡಿದರು.

ಉಗ್ರರಿಗೆ ಹಣಕಾಸು ನೆರವು ಒದಗಿಸುತ್ತಿದ್ದ ಮುಖಂಡರನ್ನು ಜಮ್ಮು ಕಾಶ್ಮೀರದಲ್ಲಿ ಬಂಧಿಸಲಾಗಿದ್ದು, ಈವರೆಗೆ ಒಬ್ಬರಿಗೂ ಜಾಮೀನು ದೊರೆತಿಲ್ಲ. ಉಗ್ರ ಸಂಘಟನೆಗಳಿಗೆ ಪಾಕಿಸ್ತಾನದಿಂದ ಹಣ ಸಹಾಯ ಮಾಡುತ್ತಿದ್ದು, ಹವಾಲಾ ಮೂಲಕ ಭಾರತಕ್ಕೆ ಹಣ ಬರುತ್ತಿದೆ ಎಂದು ಅವರು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: 10 ಮಂದಿಗೆ ಗಂಭೀರ ಗಾಯಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: 10 ಮಂದಿಗೆ ಗಂಭೀರ ಗಾಯ

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಮಾತನಾಡಿ, 'ಕಾಶ್ಮೀರದಲ್ಲಿ ಉಗ್ರರ ನಿಗ್ರಹ ಕುರಿತಂತೆ ಎನ್‌ಐಎ ಮಾಡಿದಷ್ಟು ಕೆಲಸವನ್ನು ಇನ್ನಾವುದೇ ಸಂಸ್ಥೆ ಮಾಡಿಲ್ಲ' ಎಂದು ಹೇಳಿದರು.

English summary
NIA Chief Yogesh Chander said that, Bangaladesh's Jamaat-Ul-Mujahideen terrorist active in India. Terrorists active in Karnataka, Kerala, Bihar, Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X