ಅಮ್ಮನ ಅಂತ್ಯಕ್ರಿಯೆ ನೆರವೇರಿಸಿದ ಸುಷ್ಮಾ ಪುತ್ರಿ ಬಾನ್ಸುರಿ ಸ್ವರಾಜ್
ನವದೆಹಲಿ, ಆಗಸ್ಟ್ 07: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಂತ್ಯಕ್ರಿಯೆಯನ್ನು ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ನೆರವೇರಿಸಿದ್ದಾರೆ.
ಚಿತ್ರಗಳಲ್ಲಿ ಸುಷ್ಮಾ ಸ್ವರಾಜ್ ಅಂತಿಮ ದರ್ಶನ
ನವದೆಹಲಿಯ ಲೋಧಿ ರಸ್ತೆಯ ರುದ್ರ ಭೂಮಿಯಲ್ಲಿ ಅವರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ನಡೆದಿದ್ದು, ಗಂಡು ಮಕ್ಕಳಿಲ್ಲದ ಕಾರಣ, ಅವರ ಪುತ್ರಿಯೇ ಅಂತ್ಯಕ್ರಿಯ ನೆರವೇರಿಸಿದ್ದಾರೆ.
ಹೃದಯಾಘಾತದಿಂದ ಮಂಗಳವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ 67 ವರ್ಷ ವಯಸ್ಸಿನ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರವನ್ನು ನಿನ್ನೆ ರಾತ್ರಿ ಅವರ ದೆಹಲಿ ನಿವಾಸಕ್ಕೆ ಕೊಂಡೊಯ್ಯಲಾಗಿತ್ತು. ನಂತರ ಇಂದು ಬೆಳಿಗ್ಗೆ ಬಿಜೆಪಿ ಕಾರ್ಯಾಲಯದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಮೆರವಣಿಯೆ ಮೂಲಕ ಅವರ ಪಾರ್ಥಿವ ಶರೀರವನ್ನು ರುದ್ರ ಭೂಮಿಕೆ ತರಲಾಗಿತ್ತು.

ಅಗಲಿದ ಶ್ರೇಷ್ಠ ನಾಯಕಿಯ ಅಂತಿಮ ದರ್ಶನಕ್ಕೆ ಬಿಜೆಪಿ, ಕಾಂಗ್ರೆಸ್ ಮುಂತಾಗಿ ಎಲ್ಲ ಪಕ್ಷದ ಗಣ್ಯರೂ ಹಾಜರಾಗಿ ಸುಷ್ಮಾ ಸ್ವರಾಜ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಸುಷ್ಮಾ ಸ್ವರಾಜ್ ನೆನಪು ಹಸಿರಾಗಿಸುವ ಸುಂದರ ಚಿತ್ರಗಳು
ಕಳೆದ ವರ್ಷ ಆಗಸ್ಟ್ ನಲ್ಲಿ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಕ್ರಿಯೆಯನ್ನೂ ಅವರ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ನೆರವೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications