ಭಾರತ್ ಬಂದ್‌ಗೆ ರಾಷ್ಟ್ರ ರಾಜಧಾನಿಯಲ್ಲಿ ಹೇಗಿದೆ ಪ್ರತಿಕ್ರಿಯೆ?: ಪ್ರಮುಖ ಅಂಶಗಳು
ನವದೆಹಲಿ, ಸಪ್ಟೆಂಬರ್ 27: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ಭಾರತ್ ಬಂದ್ ಕರೆ ನೀಡಿದ್ದು, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನಗಳ ಸಂಚಾರವು ಸ್ಥಗಿತಗೊಂಡಿದೆ. ರೈತರು ಪ್ರತಿಭಟನೆ ನಡೆಸುತ್ತಿರುವ ಅದರ ಎಲ್ಲಾ ಕ್ಯಾರೇಜ್‌ವೇಗಳನ್ನು ನಿರ್ಬಂಧಿಸಲಾಗಿದೆ. "ರೈತರ ಪ್ರತಿಭಟನೆಯಿಂದಾಗಿ ಉತ್ತರ ಪ್ರದೇಶದಿಂದ ಗಾಜಿಪುರ ಕಡೆಗಿನ ಸಂಚಾರ ಸಂಚಾರವನ್ನು ನಿರ್ಬಂಧಿಸಲಾಗಿದೆ," ಎಂದು ದೆಹಲಿ ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮುನ್ನಡೆಸುತ್ತಿರುವ 40ಕ್ಕೂ ಹೆಚ್ಚು ಕೃಷಿ ಒಕ್ಕೂಟಗಳ ಸಂಯುಕ್ತ ಕಿಸಾನ್ ಮೋರ್ಚಾ (SKM) ಸೋಮವಾರ ರಾಷ್ಟ್ರವ್ಯಾಪಿ ಭಾರತ್ ಬಂದ್ ನಡೆಸಲು ಕರೆ ನೀಡಿದೆ. ಬಂದ್ ಅನ್ನು ಸ್ವಯಂಪ್ರೇರಿತ ಮತ್ತು ಶಾಂತಿಯುತವಾಗಿ ಜಾರಿಗೊಳಿಸಲಾಗುವುದು ಎಂದು ಮೊರ್ಚಾ ಭರವಸೆ ನೀಡಿದೆ.
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದಲೂ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಪ್ರತಿಭಟನೆ ನಡೆಸಲು ಆರಂಭಿಸಿ 10 ತಿಂಗಳೇ ಕಳೆದು ಹೋಗಿವೆ. ಮುಂದಿನ 10 ವರ್ಷಗಳವರೆಗೂ ರೈತರು ತಮ್ಮ ಹೋರಾಟ ಮುಂದುವರಿಸುವುದಕ್ಕೆ ಸಿದ್ಧರಿದ್ದೇವೆಯೇ ಹೊರತೂ ಕೇಂದ್ರ ಸರ್ಕಾರದ ಕಪ್ಪು ಕಾಯ್ದೆಗಳ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ ಸೋಮವಾರ ಕರೆ ನೀಡಿರುವ ಭಾರತ್ ಬಂದ್ ಕುರಿತು ಪ್ರಮುಖ ಅಂಶಗಳನ್ನು ಮುಂದೆ ಪಟ್ಟಿ ಮಾಡಲಾಗಿದೆ.

ಭಾರತ್ ಬಂದ್ ಕುರಿತು ಪ್ರಮುಖ ಅಂಶಗಳು:
* ಸಂಜೆ 4 ಗಂಟೆಯವರೆಗೆ ಭಾರತ್ ಬಂದ್ ನಡೆಯಲಿದೆ. ಈ ಅವಧಿಯಲ್ಲಿ ದೇಶಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶೈಕ್ಷಣಿಕ ಮತ್ತು ಇತರ ಸಂಸ್ಥೆಗಳು, ಅಂಗಡಿಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಕಾರ್ಯಗಳು ಮುಚ್ಚಿರುತ್ತವೆ.
* ಆಸ್ಪತ್ರೆಗಳು, ವೈದ್ಯಕೀಯ ಅಂಗಡಿಗಳು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಮತ್ತು ವೈಯಕ್ತಿಕ ತುರ್ತುಸ್ಥಿತಿಗಳಿಗೆ ಹಾಜರಾಗುವ ಜನರು ಸೇರಿದಂತೆ ಎಲ್ಲಾ ತುರ್ತು ಸಂಸ್ಥೆಗಳು ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.
* ಭಾರತ್ ಬಂದ್ 500ಕ್ಕೂ ಹೆಚ್ಚು ರೈತ ಸಂಘಟನೆಗಳು, 15 ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು, ಆರು ರಾಜ್ಯ ಸರ್ಕಾರಗಳು ಮತ್ತು ಸಮಾಜದ ವಿವಿಧ ವಿಭಾಗಗಳಿಂದ ಬೆಂಬಲ ಪಡೆದುಕೊಂಡಿದೆ.
* ಭಾರತ್ ಬಂದ್ ಪ್ರತಿಭಟನೆಗೆ ತಮಿಳುನಾಡು, ಛತ್ತೀಸಗಢ, ಕೇರಳ, ಪಂಜಾಬ್, ಜಾರ್ಖಂಡ್ ಮತ್ತು ಆಂಧ್ರಪ್ರದೇಶ ರಾಜ್ಯ ಸರ್ಕಾರಗಳು ತಮ್ಮ ಬೆಂಬಲ ಸೂಚಿಸಿವೆ.
* ಕೇಂದ್ರ ಕಾರ್ಮಿಕ ಸಂಘಟನೆಗಳು ಸೋಮವಾರ ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸುತ್ತವೆ. ರೈತರ ಹೋರಾಟಕ್ಕೆ ಹಲವಾರು ವಕೀಲರ ಸಂಘಗಳು ಮತ್ತು ಅಖಿಲ ಭಾರತ ವಕೀಲರ ಸಂಘದ ಸ್ಥಳೀಯ ಘಟಕಗಳು ತಮ್ಮ ಬೆಂಬಲವನ್ನು ನೀಡಿವೆ.
ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್:
ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟಕ್ಕೆ 10 ತಿಂಗಳು ಪೂರೈಸಿದ ಹಿನ್ನೆಲೆ ಸೆಪ್ಟೆಂಬರ್ 27ರ ಸೋಮವಾರ ಭಾರತ್ ಬಂದ್ ನಡೆಸುವುದಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಈ ಮಧ್ಯೆ ನಡೆದ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಮಾತನಾಡಿರುವ ರಾಕೇಶ್ ಟಿಕಾಯತ್, ಪ್ರಸ್ತುತ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸದಿದ್ದರೆ ಮುಂಬರುವ ಸರ್ಕಾರವು ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. "ಈ ದೇಶದಲ್ಲಿ ಯಾವ ಸರ್ಕಾರ ಆಡಳಿತ ನಡೆಸುತ್ತದೆಯೋ ಆ ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು, ನಾವು ಈ ಕಾಯ್ದೆಗಳನ್ನು ಜಾರಿಗೊಳಿಸುವುದಕ್ಕೆ ಬಿಡುವುದಿಲ್ಲ, ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ," ಎಂದು ಎಚ್ಚರಿಕೆ ನೀಡಿದ್ದಾರೆ.
ವಿವಾದಿತ ಕೃಷಿ ಕಾಯ್ದೆ ಮತ್ತು ರೈತರ ಹೋರಾಟ:
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications