ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್ ಬಂದ್‌ಗೆ ರಾಷ್ಟ್ರ ರಾಜಧಾನಿಯಲ್ಲಿ ಹೇಗಿದೆ ಪ್ರತಿಕ್ರಿಯೆ?: ಪ್ರಮುಖ ಅಂಶಗಳು

|
Google Oneindia Kannada News

ನವದೆಹಲಿ, ಸಪ್ಟೆಂಬರ್ 27: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ಭಾರತ್ ಬಂದ್ ಕರೆ ನೀಡಿದ್ದು, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನಗಳ ಸಂಚಾರವು ಸ್ಥಗಿತಗೊಂಡಿದೆ. ರೈತರು ಪ್ರತಿಭಟನೆ ನಡೆಸುತ್ತಿರುವ ಅದರ ಎಲ್ಲಾ ಕ್ಯಾರೇಜ್‌ವೇಗಳನ್ನು ನಿರ್ಬಂಧಿಸಲಾಗಿದೆ. "ರೈತರ ಪ್ರತಿಭಟನೆಯಿಂದಾಗಿ ಉತ್ತರ ಪ್ರದೇಶದಿಂದ ಗಾಜಿಪುರ ಕಡೆಗಿನ ಸಂಚಾರ ಸಂಚಾರವನ್ನು ನಿರ್ಬಂಧಿಸಲಾಗಿದೆ," ಎಂದು ದೆಹಲಿ ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮುನ್ನಡೆಸುತ್ತಿರುವ 40ಕ್ಕೂ ಹೆಚ್ಚು ಕೃಷಿ ಒಕ್ಕೂಟಗಳ ಸಂಯುಕ್ತ ಕಿಸಾನ್ ಮೋರ್ಚಾ (SKM) ಸೋಮವಾರ ರಾಷ್ಟ್ರವ್ಯಾಪಿ ಭಾರತ್ ಬಂದ್ ನಡೆಸಲು ಕರೆ ನೀಡಿದೆ. ಬಂದ್ ಅನ್ನು ಸ್ವಯಂಪ್ರೇರಿತ ಮತ್ತು ಶಾಂತಿಯುತವಾಗಿ ಜಾರಿಗೊಳಿಸಲಾಗುವುದು ಎಂದು ಮೊರ್ಚಾ ಭರವಸೆ ನೀಡಿದೆ.

'ಭಾರತ್ ಬಂದ್' ಮೊದಲೇ ಕೇಂದ್ರ ಸರ್ಕಾರಕ್ಕೆ ರೈತರು ನೀಡಿದ ಎಚ್ಚರಿಕೆ!? 'ಭಾರತ್ ಬಂದ್' ಮೊದಲೇ ಕೇಂದ್ರ ಸರ್ಕಾರಕ್ಕೆ ರೈತರು ನೀಡಿದ ಎಚ್ಚರಿಕೆ!?

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದಲೂ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಪ್ರತಿಭಟನೆ ನಡೆಸಲು ಆರಂಭಿಸಿ 10 ತಿಂಗಳೇ ಕಳೆದು ಹೋಗಿವೆ. ಮುಂದಿನ 10 ವರ್ಷಗಳವರೆಗೂ ರೈತರು ತಮ್ಮ ಹೋರಾಟ ಮುಂದುವರಿಸುವುದಕ್ಕೆ ಸಿದ್ಧರಿದ್ದೇವೆಯೇ ಹೊರತೂ ಕೇಂದ್ರ ಸರ್ಕಾರದ ಕಪ್ಪು ಕಾಯ್ದೆಗಳ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ ಸೋಮವಾರ ಕರೆ ನೀಡಿರುವ ಭಾರತ್ ಬಂದ್ ಕುರಿತು ಪ್ರಮುಖ ಅಂಶಗಳನ್ನು ಮುಂದೆ ಪಟ್ಟಿ ಮಾಡಲಾಗಿದೆ.

Bharat Bandh News: Delhi-Meerut Expressway Blocked and Read Key Points

ಭಾರತ್ ಬಂದ್ ಕುರಿತು ಪ್ರಮುಖ ಅಂಶಗಳು:

* ಸಂಜೆ 4 ಗಂಟೆಯವರೆಗೆ ಭಾರತ್ ಬಂದ್ ನಡೆಯಲಿದೆ. ಈ ಅವಧಿಯಲ್ಲಿ ದೇಶಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶೈಕ್ಷಣಿಕ ಮತ್ತು ಇತರ ಸಂಸ್ಥೆಗಳು, ಅಂಗಡಿಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಕಾರ್ಯಗಳು ಮುಚ್ಚಿರುತ್ತವೆ.

* ಆಸ್ಪತ್ರೆಗಳು, ವೈದ್ಯಕೀಯ ಅಂಗಡಿಗಳು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಮತ್ತು ವೈಯಕ್ತಿಕ ತುರ್ತುಸ್ಥಿತಿಗಳಿಗೆ ಹಾಜರಾಗುವ ಜನರು ಸೇರಿದಂತೆ ಎಲ್ಲಾ ತುರ್ತು ಸಂಸ್ಥೆಗಳು ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

* ಭಾರತ್ ಬಂದ್ 500ಕ್ಕೂ ಹೆಚ್ಚು ರೈತ ಸಂಘಟನೆಗಳು, 15 ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು, ಆರು ರಾಜ್ಯ ಸರ್ಕಾರಗಳು ಮತ್ತು ಸಮಾಜದ ವಿವಿಧ ವಿಭಾಗಗಳಿಂದ ಬೆಂಬಲ ಪಡೆದುಕೊಂಡಿದೆ.

* ಭಾರತ್ ಬಂದ್ ಪ್ರತಿಭಟನೆಗೆ ತಮಿಳುನಾಡು, ಛತ್ತೀಸಗಢ, ಕೇರಳ, ಪಂಜಾಬ್, ಜಾರ್ಖಂಡ್ ಮತ್ತು ಆಂಧ್ರಪ್ರದೇಶ ರಾಜ್ಯ ಸರ್ಕಾರಗಳು ತಮ್ಮ ಬೆಂಬಲ ಸೂಚಿಸಿವೆ.

* ಕೇಂದ್ರ ಕಾರ್ಮಿಕ ಸಂಘಟನೆಗಳು ಸೋಮವಾರ ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸುತ್ತವೆ. ರೈತರ ಹೋರಾಟಕ್ಕೆ ಹಲವಾರು ವಕೀಲರ ಸಂಘಗಳು ಮತ್ತು ಅಖಿಲ ಭಾರತ ವಕೀಲರ ಸಂಘದ ಸ್ಥಳೀಯ ಘಟಕಗಳು ತಮ್ಮ ಬೆಂಬಲವನ್ನು ನೀಡಿವೆ.

ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್:

ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟಕ್ಕೆ 10 ತಿಂಗಳು ಪೂರೈಸಿದ ಹಿನ್ನೆಲೆ ಸೆಪ್ಟೆಂಬರ್ 27ರ ಸೋಮವಾರ ಭಾರತ್ ಬಂದ್ ನಡೆಸುವುದಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಈ ಮಧ್ಯೆ ನಡೆದ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಮಾತನಾಡಿರುವ ರಾಕೇಶ್ ಟಿಕಾಯತ್, ಪ್ರಸ್ತುತ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸದಿದ್ದರೆ ಮುಂಬರುವ ಸರ್ಕಾರವು ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. "ಈ ದೇಶದಲ್ಲಿ ಯಾವ ಸರ್ಕಾರ ಆಡಳಿತ ನಡೆಸುತ್ತದೆಯೋ ಆ ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು, ನಾವು ಈ ಕಾಯ್ದೆಗಳನ್ನು ಜಾರಿಗೊಳಿಸುವುದಕ್ಕೆ ಬಿಡುವುದಿಲ್ಲ, ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ," ಎಂದು ಎಚ್ಚರಿಕೆ ನೀಡಿದ್ದಾರೆ.

ವಿವಾದಿತ ಕೃಷಿ ಕಾಯ್ದೆ ಮತ್ತು ರೈತರ ಹೋರಾಟ:

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ.

English summary
Bharat Bandh News: Delhi-Meerut Expressway Blocked and Read Key Points.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X