ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Bilkis Bano Case : ಬಿಲ್ಕಿಸ್ ಅಪರಾಧಿಗಳ ರಿಲೀಸ್, ಗುಜರಾತ್‌ಗೆ ಸುಪ್ರೀಂ ನೋಟಿಸ್

|
Google Oneindia Kannada News

ನವದೆಹಲಿ, ಆಗಸ್ಟ್ 25: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಿಗೆ ಗುಜರಾತ್ ಸರಕಾರ ನೀಡಿದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ವಿಚಾರಣೆ ನಡೆಸಿದ್ದು, ಗುಜರಾತ್ ಸರಕಾರಕ್ಕೆ ನೋಟಿಸ್ ನೀಡಿದೆ.

ಗುಜರಾತ್ ಸರಕಾರದಿಂದ ಪ್ರತಿಕ್ರಿಯೆ ಕೇಳಿರುವ ಸುಪ್ರೀಂ ಕೋರ್ಟ್, ನೋಟಿಸ್ ಜಾರಿ ಮಾಡಿದೆ.

Breaking: ಬಿಲ್ಕಿಸ್ ಅಪರಾಧಿಗಳ ಬಿಡುಗಡೆ, ಸುಪ್ರೀಂನಲ್ಲಿ ವಿಚಾರಣೆBreaking: ಬಿಲ್ಕಿಸ್ ಅಪರಾಧಿಗಳ ಬಿಡುಗಡೆ, ಸುಪ್ರೀಂನಲ್ಲಿ ವಿಚಾರಣೆ

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಪ್ರಕರಣದಲ್ಲಿ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಕಳೆದ ವಾರ ಗುಜರಾತ್ ಸರಕಾರ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

Bilkis Bano Rape Case: Supreme Court Notice To Gujarat Over Grant of Remission to 11 Convicts

ಹಳತಾದ ಕ್ಷಮಾದಾನ ನೀತಿಯ ಅಡಿಯಲ್ಲಿ ಗುಜರಾತ್ ಸರಕಾರವು ಸ್ವಾತಂತ್ರ್ಯ ದಿನದಂದು ಅಪರಾಧಿಗಳನ್ನು ಬಿಡುಗಡೆ ಮಾಡಿತು, ಇದು ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಹಲವು ಮಂದಿ ಸರಕಾರದ ಕ್ರಮದ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ವಿಚಾರಣೆಯ ಸಮಯದಲ್ಲಿ, ಉನ್ನತ ನ್ಯಾಯಾಲಯವು "ಈ ನ್ಯಾಯಾಲಯವು ಅವರ ಬಿಡುಗಡೆಗೆ ಆದೇಶ ನೀಡಲಿಲ್ಲ. ಆದರೆ, ನೀತಿಯ ಪ್ರಕಾರ ಪರಿಹಾರವನ್ನು ಪರಿಗಣಿಸಲು ರಾಜ್ಯಕ್ಕೆ ತಿಳಿಸಿತ್ತು" ಎಂದು ಒತ್ತಿಹೇಳಿದೆ.

ಪ್ರಕರಣದಲ್ಲಿ 11 ಅಪರಾಧಿಗಳನ್ನು ಕಕ್ಷಿದಾರರನ್ನಾಗಿ ಮಾಡಲು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ.

2002 ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನೋ ಹಿಂಸಾಚಾರದಿಂದ ತಪ್ಪಿಸಿಕೊಳ್ಳುತ್ತಿದ್ದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅಪರಾಧಿಗಳು ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಏಳು ಸದಸ್ಯರನ್ನು ಸಹ ಕೊಂದಿದ್ದಾರೆ. ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಕೊಂದ ಆರೋಪದಲ್ಲಿ 2008 ರಲ್ಲಿ 11 ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು.

Bilkis Bano Rape Case: Supreme Court Notice To Gujarat Over Grant of Remission to 11 Convicts

ಗುಜರಾತ್ ಸರ್ಕಾರದ ಕ್ಷಮಾಪಣಾ ನೀತಿಯಡಿಯಲ್ಲಿ ಭಾರತದ ಸ್ವಾತಂತ್ರ್ಯ ದಿನದಂದು ಸುಮಾರು 15 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ 11 ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಅಪರಾಧಿಗಳ ಬಿಡುಗಡೆಯು ಭಾರಿ ಆಕ್ರೋಶವನ್ನು ಉಂಟುಮಾಡಿತ್ತು.

ಅನೇಕ ಮಂದಿ ಸರಕಾರದ ಕ್ರಮವನ್ನು ಪ್ರಶ್ನಿಸಿದ್ದರು. ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿವೆ. ಅಪರಾಧಿಗಳು ಜೈಲಿನಿಂದ ಬಿಡುಗಡೆಗೊಂಡಿದ್ದಕ್ಕೆ ಹಲವು ಮಂದಿ ಸಿಹಿ ಹಂಚಿ ಸಂಭ್ರಮಿಸಿದ್ದ ಕೃತ್ಯಗಳು ನಡೆದಿದ್ದವು. 11 ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಅರ್ಜಿದಾರರಲ್ಲಿ ತೃಣಮೂಲ ಸಂಸದೆ ಕೂಡ ಒಬ್ಬರು.

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಅಪರಾಧಿಗಳ ಬಿಡುಗಡೆ ವಿರುದ್ಧದ ಮೂರು ಅರ್ಜಿಗಳನ್ನು ವಿಚಾರಣೆ ನಡೆಸಿದ್ದಾರೆ. ಸಿಪಿಎಂ ನಾಯಕಿ ಸುಭಾಷಿಣಿ ಅಲಿ ಅವರು ವಕೀಲ ಕಪಿಲ್ ಸಿಬಲ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ, ಎರಡನೆಯದು ಮಹುವಾ ಮೊಯಿತ್ರಾ ಅವರು ಅಭಿಷೇಕ್ ಸಿಂಘ್ವಿ ಮೂಲಕ ಮತ್ತು ಮೂರನೇ ಅರ್ಜಿಯನ್ನು ವಕೀಲೆ ಅಪರ್ಣಾ ಭಟ್ ಸಲ್ಲಿಸಿದ್ದಾರೆ.

ಅಪರಾಧಿಗಳ ಬಿಡುಗಡೆ ಹಿನ್ನೆಲೆ ದೇಶಾದ್ಯಂತ ವಿರೋಧ ಪಕ್ಷದ ನಾಯಕರು ಗುಜರಾತ್ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಅಪರಾಧಿಗಳ ಬಿಡುಗಡೆಯ ದಿನಗಳ ನಂತರ, ಬಿಲ್ಕಿಸ್ ಬಾನೊ ಅವರು ನ್ಯಾಯ ವ್ಯವಸ್ಥೆಯಲ್ಲಿ ಅವರಿಗಿದ್ದ ನಂಬಿಕೆಯನ್ನು ಅಲುಗಾಡಿಸಿದ್ದಾರೆ. ಈ ನಿರ್ಧಾರ ಆಘಾತಕ್ಕೆ ನೂಕಿದೆ ಎಂದಿದ್ದರು. . ಯಾವುದೇ ಕಾನೂನು ಕ್ರಮದ ಬಗ್ಗೆ ನಿರ್ಧರಿಸಲು ತಮ್ಮ ಕುಟುಂಬವು ತುಂಬಾ ಕಂಗಾಲಾಗಿದೆ ಎಂದು ಆತಂಕ ಹೊರಹಾಕಿದ್ದರು.

English summary
Bilkis Bano Rape Case: Supreme Court Notice To Gujarat Over Grant of Remission to 11 Convicts. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X