"ಶಾಹಿನ್ ಬಾಗ್ ಹೋರಾಟಗಾರರಿಗೆ ಬಿರಿಯಾನಿ": ಯೋಗಿ ವಿರುದ್ಧ ಎಫ್ಐಆರ್

ನವದೆಹಲಿ, ಫೆಬ್ರವರಿ.03: ರಾಷ್ಟ್ರ ರಾಜಧಾನಿಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರವನ್ನು ನಿಷೇಧಿಸಬೇಕು ಎಂದು ಆಪ್ ಸಂಸದ ಸಂಜಯ್ ಸಿಂಗ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

2020ರ ನವದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕ ಯೋಗಿ ಆದಿತ್ಯನಾಥ್ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಆ ಮೂಲಕ ಹಿಂಸೆಗೆ ದಾರಿ ಮಾಡಿ ಕೊಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಆಕ್ಷೇಪಾರ್ಹ ಆರೋಪಗಳನ್ನು ಮಾಡುತ್ತಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಂದ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿಎಎ ವಿರೋಧಿ ಹೋರಾಟಗಾರರಿಗೆ ಬಿರಿಯಾನಿ

ಸಿಎಎ ವಿರೋಧಿ ಹೋರಾಟಗಾರರಿಗೆ ಬಿರಿಯಾನಿ

ದೆಹಲಿ ಪ್ರಜೆಗಳಿಗೆ ಶುದ್ಧ ನೀರು ಪೂರೈಸದ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರವು ಶಾಹಿನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರಿಗೆ ಬಿರಿಯಾನಿ ನೀಡುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದರು. ದೆಹಲಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಯೋಗಿ, ದೆಹಲಿ ಪ್ರಜೆಗಳು ಕುಡಿಯುತ್ತಿರುವ ನೀರು ವಿಷಯುಕ್ತ ಎಂದ ಖಾಸಗಿ ಸಂಸ್ಥೆಯ ಸಮೀಕ್ಷೆಯ ಬಗ್ಗೆ ಉಲ್ಲೇಖಿಸಿದ್ದರು.

ಒಂದು ಧರ್ಮದ ನೆಲೆಗಟ್ಟಿನಲ್ಲಿ ಪ್ರಚಾರ ಸರಿಯಲ್ಲ

ಒಂದು ಧರ್ಮದ ನೆಲೆಗಟ್ಟಿನಲ್ಲಿ ಪ್ರಚಾರ ಸರಿಯಲ್ಲ

ಶಿವನ ಭಕ್ತರು ಅಹಿಂಸೆಯನ್ನು ಬೆಂಬಲಿಸುವುದಿಲ್ಲ ಎಂದ ಹೇಳಿಕೆ ಬಗ್ಗೆ ಆಪ್ ಸಂಸದ ಸಂಜಯ್ ಸಿಂಗ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಒಂದು ಧರ್ಮವನ್ನು ಗುರಿಯಾಗಿ ಇಟ್ಟುಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಜಾತಿ-ಧರ್ಮದ ನೆಲೆಗಟ್ಟಿನಲ್ಲಿ ಪ್ರಚಾರ ನಡೆಸುವುದು ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತದೆ ಎಂದು ಆಪ್ ಸಂಸದರು ಕಿಡಿ ಕಾರಿದ್ದಾರೆ.

ಸಾಕ್ಷ್ಯ ಒದಗಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಗೆ ಸವಾಲ್

ಸಾಕ್ಷ್ಯ ಒದಗಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಗೆ ಸವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಅವರು ಮಾಡುತ್ತಿರುವ ಆರೋಪ ನಿಜವಾಗಿದ್ದರೆ ಅದಕ್ಕೆ ಪೂರಕ ಸಾಕ್ಷ್ಯವನ್ನು ಒದಗಿಸಲಿ ಎಂದು ಸಂಸದ ಸಂಜಯ್ ಸಿಂಗ್ ಸವಾಲ್ ಹಾಕಿದ್ದಾರೆ.

ಗುಂಡೇಟಿನ ಹೇಳಿಕೆ ನೀಡಿದ್ದ ಯೋಗಿ ಆದಿತ್ಯನಾಥ್

ಗುಂಡೇಟಿನ ಹೇಳಿಕೆ ನೀಡಿದ್ದ ಯೋಗಿ ಆದಿತ್ಯನಾಥ್

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಯೋಗಿ ಆದಿತ್ಯನಾಥ್ ಲಘುವಾಗಿ ಟೀಕಿಸಿದ್ದರು. ಬಾಯಿ ಮಾತಿಗೆ ಬಗ್ಗದ ಜನರು ಪೊಲೀಸರ ಬಂದೂಕಿಗೆ ಬಗ್ಗುತ್ತಾರೆ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ ಶಿವನ ಭಕ್ತರು ಎಂದಾದರೂ ಅಹಿಂಸೆ ಬೆಂಬಲಿಸುವುದು ಉಂಟೇ. ಆದರೆ, ಮಾತಿಗೆ ಬಗ್ಗದ ಜನರನ್ನು ಗುಂಡೇಟಿನಿಂದಲೇ ಬಗ್ಗಿಸುವುದು ಅನಿವಾರ್ಯ ಎಂದು ಯೋಗಿ ಕಿಡಿ ಕಾರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+