ಮನೋಜ್ ತಿವಾರಿ ಸೇರಿ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

ನವದೆಹಲಿ, ಏಪ್ರಿಲ್ 22: ದೆಹಲಿ, ಪಂಜಾಬ್, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ರಾಜ್ಯಗಳ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ಹೆಸರಿಸಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಭಾನುವಾರದಂದು ಪ್ರಕಟವಾದ ಬಿಜೆಪಿಯ 23ನೇ ಪಟ್ಟಿಯಲ್ಲಿ 7 ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ. ಪ್ರಮುಖವಾಗಿ ಕೇಂದ್ರ ಸಚಿವ ಡಾ. ಹರ್ಷ್ ವರ್ಧನ್, ನಟ ಮನೋಜ್ ತಿವಾರಿ ಅವರ ಹೆಸರು ಘೋಷಿಸುವ ಮೂಲಕ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸಿದೆ. ದೆಹಲಿಯಲ್ಲಿ ಆಡಳಿತಾರೂಢ ಎಎಪಿ ಏಕಾಂಗಿಯಾಗಿ ಕಣಕ್ಕಿಳಿದಿದ್ದು, ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹೆಸರಿಸಿದೆ. ಕಾಂಗ್ರೆಸ್ ಇನ್ನು ತನ್ನ ಅಧಿಕೃತ ಪಟ್ಟಿಯನ್ನು ಪ್ರಕಟಿಸಿಲ್ಲ.

ದೆಹಲಿಯ ಐತಿಹಾಸಿಕ ಚಾಂದಿನಿ ಚೌಕ್ ಕ್ಷೇತ್ರದಿಂದ ಡಾ. ಹರ್ಷ್ ವರ್ಧನ್, ಈಶಾನ್ಯ ದೆಹಲಿಯಿಂದ ದೆಹಲಿ ಬಿಜೆಪಿ ಮುಖ್ಯಸ್ಥ, ಭೋಜ್ ಪುರಿ ನಟ, ಗಾಯಕ ಮನೋಜ್ ತಿವಾರಿ, ಪಶ್ಚಿಮ ದೆಹಲಿಯಿಂದ ಪ್ರವೇಶ್ ವರ್ಮಾ, ದಕ್ಷಿಣ ದೆಹಲಿಯಿಂದ ರಮೇಶ್ ಬಿಧುರಿ ಅವರಿಗೆ ಟಿಕೆಟ್ ನೀಡಲಾಗಿದೆ. ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ.

BJP announces seven candidates including Harsh Vardhan, Manoj Tiwari in Delhi

ಇನ್ನು ಅಮೃತಸರ್ ಕ್ಷೇತ್ರದಲ್ಲಿ ಮೇ 19ರಂದು ಮತದಾನ ನಡೆಯಲಿದ್ದು, ರಾಜ್ಯಸಭಾ ಸದಸ್ಯ, ಕೇಂದ್ರ ಸಚಿವ ಹರ್ದೀಪ್ ಪುರಿ ಅವರಿಗೆ ಟಿಕೆಟ್ ಸಿಕ್ಕಿದೆ.

ಉತ್ತರಪ್ರದೇಶದ ಘೋಸಿ ಲೋಕಸಭಾ ಕ್ಷೇತ್ರದಲ್ಲಿ ಕೂಡಾ ಮೇ 19ರಂದು ಮತದಾನ ನಡೆಯಲಿದ್ದು, ಈ ಕ್ಷೇತ್ರದಲ್ಲಿ ಹಾಲಿ ಸಂಸದ ಹರಿನಾರಾಯಣ್ ರಾಜ್ ಭರ್ ಅವರು ಸ್ಪರ್ಧಿಸುತ್ತಿದ್ದಾರೆ.

ಸ್ಪೀಕರ್​ ಸುಮಿತ್ರಾ ಮಹಾಜನ್​ ಅವರ ಬದಲಿಗೆ ಇಂದೋರ್​ನಿಂದ ಈ ಬಾರಿ ಶಂಕರ್​ಲಾಲ್ವಾನಿ ಅವರನ್ನು ಲೋಕಸಭಾ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ. ಮೇ 19ರಂದು ಇಲ್ಲಿ ಮತದಾನ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+